ಬೆಳಗಾವಿ ಜಿಲ್ಲೆಯಲ್ಲಿ ನಕಲಿ ದಾಖಲೆ ನೀಡಿ ರೇಷನ್ ಕಾರ್ಡ್ ಪಡೆದವರಿಗೆ ಬರೋಬ್ಬರಿ 1,88,75,946 ರೂ. ದಂಡ ವಸೂಲಿ ಮಾಡಲಾಗಿದೆ.
ಯಾರೆಲ್ಲಾ ಬಿಪಿಎಲ್ ಕಾರ್ಡ್ ಅನರ್ಹರು?ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ಸರ್ಕಾರಿ ನೌಕರರು. ಅಂದರೆ ಸರ್ಕಾರದ ಅಥವಾ ಸಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ಸೇವಾ ತೆರಿಗೆ/ವ್ಯಾಟ್/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.ಗ್ರಾಮೀಣ ಪ್ರದೇಶಗಳಲ್ಲಿ 03 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು.ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕ ಮನೆಯನ್ನು ಸ್ವಂತವಾಗಿ…
