ಬಾಗಲಕೋಟೆ ಜಿಲ್ಲೆಯ 36 ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ
ಬಾಗಲಕೋಟೆ ಜಿಲ್ಲೆಯ 36 ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.24 ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ 65 ಟಿಪ್ಪರ್, 18 ಹಿಟಾಚಿ ಸೇರಿ ಭಾರೀ ಪ್ರಮಾಣದ ಸಲಕರಣೆಗಳನ್ನು ಜಪ್ತಿ ಮಾಡಲಾಗಿದೆ. ಅಕ್ರಮ ತಡೆಯದ ಹಿನ್ನೆಲೆ ಅಧಿಕಾರಿಗಳ ವಿರುದ್ಧ ದೂರು ಕೂಡ ದಾಖಲಾಗಿದೆ. ಬಾಗಲಕೋಟೆ ಜಿಲ್ಲಾದ್ಯಂತ ದೀರ್ಘಕಾಲದಿಂದ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಹಾಕಲು ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮಾರ್ಗದರ್ಶನದಲ್ಲಿ ಹಾಗೂ ಬಾಗಲಕೋಟೆ ಲೋಕಾಯುಕ್ತ…
