BREAKING NEWS

ಹೆಲ್ಮೆಟ್ ಹಾಗೂ ಮಾದಕ ವ್ಯಸನ ವಿರೋಧಿ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಬೈಕ್‌ರೈಡ್ ಮಾಡುವ ಮೂಲಕ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಪ್ರಾರಂಭಗೊAಡ ಸಂಚಾರಿ ನಿಯಮಗಳ ಪಾಲನೆ, ಮಾದಕ ವ್ಯಸನ ವಿರೋದಿ ಹಾಗೂ ಹೆಲ್ಮೆಟ್ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸೇರಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯಿತ ಸಿಎಸ್ ರಾಹುಲ್ ಶಿಂಧೆ ಬೈಕ್ ರೈಡ್ ಮಾಡುವ ಮೂಲಕ ಚಾಲನೆ ನೀಡಿ, ಪ್ರಮುಖ ಬೀದಿಗಳಲ್ಲಿ ಬೈಕ್ ರ‍್ಯಾಲಿಯ ಮೂಲಕ ರಾಮದುರ್ಗ ಪಟ್ಟನವನ್ನು ರೌಂಡ್ ಹಾಕಿದರು.ಸಂಗೋಳ್ಳಿ ರಾಯಣ್ಣ ವೃತ್ತದಿಂದ ಪ್ರಾರಂಭಗೊAಡ ಬೈಕ್ ರ‍್ಯಾಲಿ ಹುತಾತ್ಮ…

Read More

ರಾಮದುರ್ಗ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಇವರಿಂದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕಾರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಶನಿವಾರ ರಂದು ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.ರಾಜ್ಯ ಸರ್ಕಾರದ ನಿರ್ದೇಶನದಂತೆ ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಮ್ಮಿಕೊಳ್ಳುತ್ತಿದ್ದು, ಸಮಸ್ಯೆಗಳನ್ನು ಆಲಿಸಿ, ಪರಿಶೀಲಿಸಿ ಪರಿಹಾರ ನೀಡಲಾಗುತ್ತಿದೆ. ಆಡಳಿತವೆ ಜನರ ಮನೆ ಬಾಗಿಲಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂಧನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.ನಾಗರಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸ್ವಿಕೃತಿ ಪಡೆದುಕೊಳ್ಳಬೇಕು. ಅದನ್ನು ಸಂಬಂಧಪಟ್ಟ ಇಲಾಖೆ…

Read More

ಓಬಳಾಪೂರ ಗ್ರಾ.ಪಂ ಅಧಿನದ ಜಾಗದಲ್ಲಿ ರಾಷ್ಟ್ರಧ್ವಜದ ಕಂಬದ ಮುಂದೆಯೇ ಅಕ್ರವಾಗಿ ಕಟ್ಟಿದ ಅಂಗಡಿ ಕಟ್ಟಡವನ್ನು ತೆರವುಗೊಳಿಸಿದ ಅಧಿಕಾರಿಗಳು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾ.ಪಂ ಕಚೇರಿಯ ಧ್ವಜದ ಕಂಬದ ಮುಂದೆ ಅಕ್ರವಾಗಿ ಕಟ್ಟಲಾಗಿದ್ದ ಅಂಗಡಿ ಕಟ್ಟಡವನ್ನು ತೆರವುಗೊಳಿಸುವಂತೆ ಕಳೆದ ನಾಲ್ಕೈದು ವರ್ಷಗಳಿಂದ ಸಾಹಿತಿ ಹಾಗೂ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ಅವರು ಉಪವಾಸ ಸತ್ಯಾಗ್ರಹ ಸೇರಿದಂತೆ ಸಾಕಷ್ಟು ಹೋರಾಟವನ್ನು ಮಾಡಿಕೊಂಡು ಬಂದಿದ್ದರು, ಆದರೇ ಅಕ್ರಮ ಕಟ್ಟಡ ವಿಚಾರವಾಗಿ ಕೋರ್ಟ ವ್ಯಾಜ್ಯ ನಡೆದ ಕಾರಣ ವಿಳಂಬವಾಗಿತ್ತು. ಕಟ್ಟಡ ಕಟ್ಟಿರುವದು ಅಕ್ರಮ ಕಟ್ಟಡ ಎಂಬುವದು ಸಾಬಿತಾದ ಹಿನ್ನಲೇಯಲ್ಲಿ ಶನಿವಾರ ಬೆಳಿಗ್ಗೆ ತಾಲೂಕು ಪಂಚಾಯಿತ ಇಒ ಪ್ರವೀಣಕುಮಾರ ಸಾಲಿ…

Read More

ಸುರೇಬಾನ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಏರ್ಪಡಿಸಿದ್ದ ಉಚಿತ ಹೃದಯ ರೋಗ ತಪಾಸಣಾ ಶಿಬಿರ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ಘಟಕನೂರ ಹಾಗೂ ಸುರೇಬಾನ ವಲಯಗಳ ಜ್ಞಾನ ವಿಕಾಸ ಹಾಗೂ ಸ್ವ. ಸಹಾಯ ಸಂಘದ ಸದಸ್ಯರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತವಾಗಿ ಏರ್ಪಡಿಸಿದ್ದ ಹೃದಯ ರೋಗ ತಪಾಸಣಾ ಶಿಬಿರವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಎಚ್.ಆರ್. ಲವಕುಮಾರ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಆರಂಭದಲ್ಲಿ ಸಂಸ್ಥೆಯು ಕೇಲವೇ ಕೆಲವು ಪ್ರದೇಶಕ್ಕೆ ಸೀಮಿತವಾಗಿತ್ತು. ಇಂದು ರಾಜ್ಯ ಅಲ್ಲದೆ ನೆರೆಯ ರಾಜ್ಯಗಳಿಗೂ ಇದರ ಸೇವೆ ವಿಸ್ತರಿಸಿದೆ ಎಂದು ಹರ್ಷ…

Read More

ಅಂಚೆ ಇಲಾಖೆ ಹಾಗೂ ಜೆಸಿಐ ರಾಮದುರ್ಗ ಘಟಕದಿಂದ ಅಂಚೆ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ನೇಕಾರ ಪೇಠದ ವಿಠ್ಠಲ ಮಂದಿರದಲ್ಲಿ ಅಂಚೆ ಇಲಾಖೆ ಹಾಗೂ ಜೆಸಿಐ ರಾಮದುರ್ಗ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ಅಂಚೆ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ರಾಮದುರ್ಗ ಅಂಚೆ ನಿರೀಕ್ಷಕ ನಾಗರಾಜ್ ಮಳ್ಳಿಪಾಲ್ಗೊಂಡು ಅವರು ಮಾತನಾಡಿದರು.ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ತೆರೆದರೆ ನಿಮ್ಮ ಬೇರೆ ಯಾವುದೇ ಬ್ಯಾಂಕಿನಲ್ಲಿ ನಿಮ್ಮ ಹಣ ಇದ್ದರೆ ಆ ಹಣವನ್ನು ನೀವು ನಿಮ್ಮ ಮನೆಯಲ್ಲಿ ಇದ್ದುಕೊಂಡು ಹಣ ಪಡೆಯಬಹುದು. ಅಂಚೆಯ ಪೋಸ್ಟ್ ಮ್ಯಾನ್ ನಿಮ್ಮ ಮನೆಗೆ ಬಂದು ಹಣವನ್ನು ಸಂದಾಯ…

Read More

ಮನೆ-ಮನೆಗೆ ತೆರಳಿ ಸಾರ್ವಜನಿಕರಲ್ಲಿ ಡೆಂಗ್ಯೂ ಜಾಗೃತಿ ಮೂಡಿಸಿದ ಜಿಪಂ ಸಿಇಓ ರಾಹುಲ್ ಶರಣಪ್ಪ ಸಂಕನೂರ

ಮನೆ ಸುತ್ತ-ಮುತ್ತಲಿನ ಪರಿಸರದಲ್ಲಿ ನಮ್ಮ ಸಣ್ಣ ನಿರ್ಲಕ್ಷ್ಯವೂ ಡೆಂಗಿ ಜ್ವರದಿಂದ ನರಳುವಂತೆ ಮಾಡಬಹುದು. ಹಾಗಾಗಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ಮುಕ್ತಗೊಳಿಸಿ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಲಾರ್ವಾ ಸೊಳ್ಳೆಗಳನ್ನು ಪತ್ತೆ ಹಚ್ಚಿ ನಾಶಗೊಳಿಸಲು ರಾಜ್ಯ ಸರ್ಕಾರ ನಿರ್ದೇಶನದಂತೆ ಈಡಿಸ್ ಸೊಳ್ಳೆ ನಿರ್ಮೂಲನ ದಿನದ ಅಂಗವಾಗಿ ನಗರದ ಇಂದಿರಾನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ…

Read More

ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಇವರಿಂದ ವಿವಿಧೆಡೆ ದಾಳಿ; ನಾಲ್ವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ

ಬಳ್ಳಾರಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಪ್ಯಾನ್-ಇಂಡಿಯಾ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ಸಿರುಗುಪ್ಪ ಮತ್ತು ಸಂಡೂರು ಪಟ್ಟಣಗಳಲ್ಲಿ ದಾಳಿ ನಡೆಸಿ 04 ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಅವರು ತಿಳಿಸಿದ್ದಾರೆ. ಸಿರುಗುಪ್ಪ ಪಟ್ಟಣದ ದೇಶನೂರು ರಸ್ತೆ, ಆದೋನಿ ರಸ್ತೆ, ಬಳ್ಳಾರಿ ರಸ್ತೆ ಮತ್ತು ಸಂಡೂರು ಪಟ್ಟಣದ ಕೂಡ್ಲಿಗಿ ರಸ್ತೆ, ಹೊಸಪೇಟೆ ರಸ್ತೆ ಹಾಗೂ ಎ.ಪಿ.ಎಂ.ಸಿ ವೃತ್ತ ಮಂತಾದ ಸ್ಥಳಗಳಲ್ಲಿರುವ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್…

Read More

ವಿಎಸ್‍ಕೆವಿವಿ: ‘ರಾಜ್ಯಮಟ್ಟದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆ ಹಾಗೂ ಹೊಸ ನಿಯಮಗಳ ಕುರಿತು ಕಾರ್ಯಗಾರ’

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗ, ಕರ್ನಾಟಕ ವಾಲಿಬಾಲ್ ಸಂಸ್ಥೆ ಬೆಂಗಳೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಸಹಯೋಗದೊಂದಿಗೆ ವಿವಿಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ರಾಜ್ಯಮಟ್ಟದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆ ಹಾಗೂ ಹೊಸ ನಿಯಮಗಳ ಕುರಿತು ಕಾರ್ಯಗಾರವನ್ನು ಡಾ.ಹೆಚ್.ಡಿ.ಕೃಷ್ಣಪ್ಪ ಅವರು ಸಸಿಗೆ ನೀರ್ ಉಣಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಕ್ರೀಡೆಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಆಟಗಾರರನ್ನು ನಿರ್ಮಾಣ ಮಾಡುತ್ತವೆ. ಪರಿಶ್ರಮದ ಮೂಲಕ ತಂಡದ ಮೌಲ್ಯವನ್ನು ಹೆಚ್ಚಿಸುತ್ತವೆ. ಟೋಕಿಯೊನ ಒಲಂಪಿಕ್‍ನಿಂದ…

Read More

ಸುವರ್ಣ ವಿಧಾನಸೌಧದಲ್ಲಿ ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಯ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಗರಿಕರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಡಳಿತ ಸುಧಾರಣೆ ಪ್ರಕ್ರಿಯೆಯು ನಿರಂತರವಾಗಿರಬೇಕು. ತಾಂತ್ರಿಕ ಯುಗದಲ್ಲಿ ಪ್ರತಿಕ್ಷಣವೂ ಅಮೂಲ್ಯವಾಗಿದ್ದು, ಸಾರ್ವಜನಿಕರಿಗೆ ಪಾರದರ್ಶಕ ಹಾಗೂ ನ್ಯಾಯಬದ್ಧವಾದ ಆಡಳಿತ ದೊರಕಬೇಕು.ಈ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಹಾಕುತ್ತಿದೆ.ಸಾರ್ವಜನಿಕರ ಕೆಲಸಗಳನ್ನು ನಿಯಮಾನುಸಾರ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮಾತನಾಡಿ ಕಂದಾಯ…

Read More

ಗ್ರಾಮ ಆರೋಗ್ಯ ಅಭಿಯಾನ ಕಾರ್ಯಕ್ರಮಕ್ಕೆ ತಾಲೂಕ ಪಂಚಾಯತ ಇಒ ಪ್ರವೀಣಕುಮಾರ ಸಾಲಿ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಳೆತೊರಗಲ್ಲ ಗ್ರಾಮ ಪಂಚಾಯತ ವ್ಯಾಪ್ತಿಯ ಮಾಗನೂರ ಗ್ರಾಮದಲ್ಲಿ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡ ಗ್ರಾಮ ಆರೋಗ್ಯ ಅಭಿಯಾನ ಕಾರ್ಯಕ್ರಮಕ್ಕೆ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣಕುಮಾರ ಸಾಲಿ ಚಾಲನೆ ನೀಡಿ ಅವರು ಮಾತನಾಡಿದರು.ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗಾಗಿ ಇಲಾಖೆಯಿಂದ ಸಿಗುವ ಅನುಕೂಲ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು. ಕೂಲಿ ಕಾರ್ಮಿಕರು ಸರಕಾರದ ಸೌಲಭ್ಯ ಪಡೆದುಕೊಂಡು ಆರ್ಥಿಕವಾಗಿ ಪ್ರಗತಿ ಹೊಂದಬೇಕು ಎಂದು ಹೇಳಿದರು.ಸಹಾಯಕ ನಿರ್ದೇಶಕ ಸಂಗನಗೌಡ ಹಂದ್ರಾಳ ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರ್ಮೀಕರು…

Read More