ಧಾರವಾಡ ಶೂಟೌಟ್ ಕೇಸ್ ಭೇದಿಸಿದ ಖಾಕಿ: ಐವರು ಆರೋಪಿಗಳ ಬಂಧನ, ಪಿಸ್ತೂಲ್ ಹಾಗೂ ರಿವಾಲ್ವರ್ ಜಪ್ತಿ!
ಧಾರವಾಡ ಹೊರವಲಯದ ತಡಸಿನಕೊಪ್ಪ ಬಳಿಯ ಇಟಿಗಟ್ಟಿ ರಸ್ತೆ ಮಾರ್ಗದಲ್ಲಿ ಕಳೆದ ದಿನ ನಡೆದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಗಲಾಟೆ ನಡೆದು ಗಾಳಿಯಲ್ಲಿ ಗುಂಡು ಹಾರಿಸಿ ವ್ಯಕ್ತಿಯೊಬ್ಬನಿಗೆ ಗಾಯಗೊಳಿಸಿದ ಪ್ರಕರಣದಲ್ಲಿ ಐವರನ್ನ ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಈ ಕುರಿತು ಧಾರವಾಡದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲು ಅಂಗರಕ್ಷಕರು (ಬೌನ್ಸರ್ಸ್) ಗುಂಡು ಹಾರಿಸಿದ್ದಾರೆ ಎಂಬ ಮಾಹಿತಿ ಇತ್ತಾದರೂ, ಘಟನೆಯ ಬಳಿಕ ಪೊಲೀಸರಿಗೆ ಲಭ್ಯವಾದ ಕೆಲವು ಪ್ರಮುಖ ವಿಡಿಯೋ ತುಣುಕುಗಳ…
