ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!
ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. 600 ಮನೆಗಳ ನಿರ್ಮಾಣಕ್ಕೆಂದು 33 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು. ಮನೆಗಳನ್ನು ನಿರ್ಮಿಸದೇ ಅನುದಾನದಲ್ಲಿ 23. 35 ಕೋಟಿ ರೂಪಾಯಿ ಗುಳುಂ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ದೂರಿನ ಅನ್ವಯ ಬೆಳಗಾವಿ ಲೋಕಾಯುಕ್ತ ಎಸ್ಪಿ ಪ್ರಶನ್ ದೇಸಾಯಿ ನೇತೃತ್ವದಲ್ಲಿ ಬೆಂಗಳೂರು ನಗರ, ಧಾರವಾಡ, ರಾಮದುರ್ಗ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗಳಿಗೆ ಸೇರಿದ 8 ಕಡೆಗಳಲ್ಲಿ ದಾಳಿ…
