ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ, ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ ಮಾಡಲು “ಬುದ್ಧ, ಬಸವ, ಅಂಬೇಡ್ಕರ್ ನಿವೇಶನ ಹಂಚಿಕೆ” ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಡಾ.ಬಾಬಾಸಾಹೇಬ್ ಜನ್ಮದಿನಾಚರಣೆ ಅಂಗವಾಗಿ ನಗರದ ಡಾ.ಅಂಬೇಡ್ಕರ್ ಉದ್ಯಾನದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದೇಶದಲ್ಲೇ ಮೊದಲ ಪ್ರಯೋಗ: ಸುಮಾರು 20 ವರ್ಷಗಳಿಂದ ಎಸ್.ಸಿ/ಎಸ್….
