ರಾಜ್ಯದಲ್ಲಿ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ; ಸರ್ಕಾರದ ಮಾರ್ಗಸೂಚಿ ಪ್ರಕಟ
ವಸತಿ ಕಟ್ಟಡಕ್ಕೆ ಶಾಶ್ವತ ವಿದ್ಯುತ್ ಸಂಪರ್ಕ, ಅರ್ಜಿ ಸಲ್ಲಿಸಲು 15 ದಿನ ಅವಕಾಶ ಬೆಂಗಳೂರು: ರಾಜ್ಯದಲ್ಲಿ ವಸತಿ ಕಟ್ಟಡಗಳ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಎದುರಾಗುತ್ತಿದ್ದ ತೊಂದರೆ ನಿವಾರಣೆಗೆ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ದಿಷ್ಟ ಮಿತಿಯೊಳಗಿನ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಸ್ವಾಧೀನಾ-ನುಭವ ಪ್ರಮಾಣಪತ್ರ (ಒಸಿ) ಒದಗಿಸುವುದರಿಂದ ಒಂದು ಬಾರಿಯ ಕ್ರಮವಾಗಿ ವಿನಾಯಿತಿ ನೀಡಿ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿನಡೆದಿದ್ದ ಸಚಿವ ಸಂಪುಟ ಸಭೆಯ ನಿರ್ಣಯದಂತೆ…
ರಾಯಚೂರು ಭ್ರಷ್ಟಾಚಾರ ನಿವಾರಣೆಗಾಗಿ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ತರಲಾಗಿದೆ. ಇದರಡಿ ಮಾಹಿತಿ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯೊಳಗೆ ಮಾಹಿತಿ ಒದಗಿಸುವುದು ಸಾರ್ವಜನಿಕ ಮಾಹಿತಿ ಅಧಿಕಾರಿ ಕರ್ತವ್ಯವಾಗಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ ಸಿಂಗ್ ಅವರು ಹೇಳಿದರು.
ರಾಯಚೂರು ನಗರದ ಕೃಷಿ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಶನಿವಾರದಂದು ರಾಯಚೂರು ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರೊಂದಿಗೆ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮಕ್ಕೆಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ ಸಿಂಗ್ಚಾಲನೆ ನೀಡಿ ಅವರು ಮಾತನಾಡಿದರು. ಮಾಹಿತಿ ಹಕ್ಕು ಕಾಯ್ದೆಯಡಿ ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿಗಳ ವೈಯಕ್ತಿಕ ಮಾಹಿತಿ ನೀಡಲು…
ಸವದತ್ತಿ ಹತ್ತಿರ ಭೀಕರ ಅಪಘಾತ; ಚಲಿಸುತ್ತಿದ್ದ CNG ಕಾರಿನಲ್ಲಿ ಬೆಂಕಿ, ಪ್ರಶಾಂತ್ ಕಲಾದಗಿ ಪ್ರಾಣಾಪಾಯದಿಂದ ಪಾರು!
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಮೀಪ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಸಿಎನ್‌ಜಿ (CNG) ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.ಕಾರಿನಲ್ಲಿದ್ದ ರಾಮದುರ್ಗ ಪಟ್ಟಣದ ನಿವಾಸಿಯಾಗಿರುವ ಪ್ರಶಾಂತ್ ಕಲಾದಗಿ ಅವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಪ್ರಶಾಂತ್ ಅವರು ರಾಮದುರ್ಗದಿಂದ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಹೋಗುವ ಸಂಧರ್ಭ ತನ್ನ ಸ್ವಂತ ಕಾರು ರಿಪೇರಿಗೆ ಅಂತಾ ಹುಬ್ಬಳ್ಳಿಯಲ್ಲಿ ಬಿಟ್ಟು ಬೆಂಗಳೂರುಗೆ ಟ್ರೇನಿಂಗ್ ಅಂತಾ ಹೋಗಿದ್ದರು ಟ್ರೇನಿಂಗ್ ಮುಗಿಸಿಕೊಂಡು ಬರುವ ಸಂಧರ್ಭ ಹುಬ್ಬಳ್ಳಿಯಲ್ಲಿದ್ದ…
ಕಾಗವಾಡ ಪೊಲೀಸರಿಂದ ಅಂತರಾಜ್ಯ ಕಳ್ಳರ ಬಂಧನ
ಬೆಳಗಾವಿ ಜಿಲ್ಲೆ ಕಾಗವಾಡ ಪೊಲೀಸ್ ಠಾಣೆಗೆ ಶ್ರೀಮತಿ ಚೆನ್ನವ್ವಾ ಗಂಡ ರಾಮು ಬಹುರುಪಿ ಸಾ:-ಸಂಕೊನಟ್ಟಿ, ತಾ:-ಅಥಣಿ ಇವರು ಠಾಣೆಗೆ ಹಾಜರಾಗಿ ದಿನಾಂಕ: 19-01-2026 ರಂದು ಪಿರ್ಯಾದಿಯನ್ನು ಕೊಟ್ಟಿದ್ದು ಅದರಲ್ಲಿ ದಿನಾಂಕ: 18-01-2026 ರಂದು 12-30 ಗಂಟೆಯ ಸುಮಾರಿಗೆ ಮಂಗಸೂಳಿ ಗ್ರಾಮದ ಬಸಸ್ಟ್ಯಾಂಡದಲ್ಲಿ ಬಸ್ಸಿನಲ್ಲಿ ಇರುವಾಗ ಯಾರೋ ಕಳ್ಳರು ಪಿರ್ಯಾದಿಯವರ ಕೊರಳಲ್ಲಿ ಧರಿಸಿರುವ 12 ಗ್ರಾಂ ತೂಕದ ಬಂಗಾರದ ತಾಳಿ ಅಕಿ= 1.20.000/-ರೂ ಕಿಮ್ಮತ್ತಿನ ಆಭರಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ಅವರ ಮೇಲೆ ನನ್ನದು ಪಿರ್ಯಾದಿ ಇದ್ದು ಮುಂದಿನ…
ಸವದತ್ತಿ ನ್ಯಾಯಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಹವ್ಮಿುಕೊಳ್ಳಲಾಗಿತ್ತು.
ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ ಹಾಗೂ ನ್ಯಾಯವಾದಿಗಳ ಸಂಘ ಇವರುಗಳ ಸಹಯೋಗದಲ್ಲಿ ದಿನಾಂಕಃ 21-06-2026 ರಂದು ಮುಂಜಾನೆ 07.00 ಗಂಟೆಗೆ ನ್ಯಾಯಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಹವ್ಮಿುಕೊಳ್ಳಲಾಗಿತ್ತು. ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ, ರವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಪಾಟಿಸಿದರು. ನಂತರ ಮಾತನಾಡಿದ ಅವರು ಯೋಗದಲ್ಲಿ ಅನೇಕ ವಿಧಗಳಿವೆ, ಪ್ರತಿಯೊಬ್ಬರು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಯೋಗವನ್ನು ಅನುಸರಿಸುತ್ತಾರೆ ಮತ್ತು ಅದನ್ನು ವ್ಯಾಖ್ಯಾನಿಸುತ್ತಾರೆ. ಜೂನ್…
ಬಳ್ಳಾರಿಯಲ್ಲಿ ‘ನಶಾ ಮುಕ್ತ ಭಾರತ ಅಭಿಯಾನ’: ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾಮಾದಕ ಮುಕ್ತ, ಆರೋಗ್ಯವಂತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ: ನ್ಯಾ.ರಾಜೇಶ್ ಎನ್. ಹೊಸಮನೆ
ಬಳ್ಳಾರಿ ಮಾದಕ ಮುಕ್ತ ಹಾಗೂ ಆರೋಗ್ಯವಂತ ಸಮಾಜದ ನಿರ್ಮಾಣ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ‘ನಶಾ ಮುಕ್ತ ಭಾರತ ಅಭಿಯಾನ’ ದ ಅಂಗವಾಗಿ ಬಳ್ಳಾರಿ ಜಿಲ್ಲಾ ಪೊಲೀಸ್ ಹಾಗೂ ಬಳ್ಳಾರಿ ಜಿಲ್ಲಾ ನರ್ಸಿಂಗ್ ಅಸೋಸಿಯೇಷನ್ ಜಂಟಿಯಾಗಿ ನಗರದ ಬಿಎಂಸಿಆರ್‌ಸಿ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು…
ಆಧುನಿಕ ಜೀವನ ಶೈಲಿಯಲ್ಲಿ ಉತ್ತಮ ಆರೋಗ್ಯ ಹೊಂದಲು ಯೋಗಾಭ್ಯಾಸ ಅಗತ್ಯ:ಪ್ರಹ್ಲಾದ ಜೋಶಿ
ಬೆಳಗಾವಿ, ಯೋಗಾಸನ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಪಾತ್ರ ಹೊಂದಿದ್ದು, ಪ್ರತಿನಿತ್ಯ ಯೋಗಾಸನ ಮಾಡುವುದರಿಂದ ನಮ್ಮ ಶರೀರದಲ್ಲಿನ ರೋಗ ರುಜಿನಗಳನ್ನು ದೂರ ಮಾಡಿಕೊಳ್ಳುವುದರ ಜೊತೆಗೆ ಮನಸ್ಸನ್ನು ಸಮಚಿತ್ತದಿಂದ ಇಟ್ಟುಕೊಳ್ಳಬಹುದಾಗಿದೆ ಎಂದು ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಬೆಳಗಾವಿ ಹಾಗೂ ಜಿಲ್ಲಾ ಆಯುಷ ಇಲಾಖೆ ಸಹಯೋಗದಲ್ಲಿ ರವಿವಾರ(ಜೂ.21) ಸುವರ್ಣ ವಿಧಾನ ಸೌಧದಲ್ಲಿ ಜರುಗಿದ 12ನೇ…
ನಾಳೆ ಬೆಟಗೇರಿ ಹನುಮಂತ ದೇವರ ಕಡೆ ಓಕುಳಿ
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತ ಶತಮಾನಗಳ ಇತಿಹಾಸವಿದೆ. ಭಕ್ತರ ಇಷ್ಟಾರ್ಥ ಪೂರೈಸುವ ಇಲ್ಲಿಯ ಹನುಮಂತ ದೇವರು. ಪ್ರತಿ ವರ್ಷಕ್ಕೊಮ್ಮೆ ಜರುಗುವ ಓಕುಳಿ ಸರ್ವ ಧರ್ಮ ಸಮನ್ವಯದ ಪ್ರತೀಕವಾಗಿದೆ. ಬೆಟಗೇರಿ ಗ್ರಾಮದ ದೊಡ್ಡ ಜಾತ್ರಾ ಮಹೋತ್ಸವ ಇದಾಗಿದೆ. ಓಕುಳಿ ಬಂತು ಅಂದರೆ ಸ್ಥಳೀಯ ಜನರ ಸಂಭ್ರಮ ಹೇಳತೀರದು.!ಜೂ. ೨೧ ರಂದು ಮುಂಜಾನೆ ೬ಗಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದ ಬಳಿಕ ಸಾಯಂಕಾಲ ೫ ಗಂಟೆಗೆ ನಡು ಓಕುಳಿ ನಡೆಯಲಿದ್ದು.ಜೂ.೨೨ರಂದು ಕಡೆ ಓಕುಳಿ…
ಬೆಳಗಾವಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ
ಬೆಳಗಾವಿ, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಪಾರದರ್ಶಕತೆಯಿಂದ ಕೈಗೊಳ್ಳುವಂತೆ ಕಾರ್ಯದರ್ಶಿಗಳು ಸಹಕಾರ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಂಜಯ ಶೆಟ್ಟಣ್ಣವರ ಅವರು ಸೂಚಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಶೀಲನೆ ಪ್ರಕ್ರಿಯೆ ರಾಜ್ಯಾದ್ಯಂತ ಪ್ರಾರಂಭವಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಜೂನ್ 30 ರಿಂದ ಅಕ್ಟೋಬರ್ 7 ರವರೆಗೆ ಜರುಗಲಿರುವ…
ಬೀಳಗಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ : 4005 ಕೆ.ಜಿ ಅಕ್ಕಿ ವಶ
ಬೀಳಗಿ: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಹಾಗೂ ಅದಕ್ಕೆ ಬಳಸಿದ ವಾಹನವನ್ನು ಮಂಗಳವಾರ ಆಹಾರ ಇಲಾಖೆಯ ಶಿರಸ್ತೇದಾರ ಹಾಗೂ ನಿರೀಕ್ಷಕರು ತಾಲ್ಲೂಕಿನ ಸುನಗ ತಾಂಡಾ 1 ಗ್ರಾಮದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಆಹಾರ ಇಲಾಖೆಯ ಸಂತೋಷ ರಬಕವಿ, ಶಿರಸ್ತೇದಾರರಾದ ಅನ್ವರ ಸನದಿ, ಶಶಿಧರ ಭಜಂತ್ರಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ವಾಹನ ಚಾಲಕ ಪರಾರಿಯಾಗಿದ್ದಾನೆ. ಒಟ್ಟು 91 ಚೀಲಗಳಲ್ಲಿ 4005 ಕೆ.ಜಿ ಅಕ್ಕಿ ಇದ್ದವು. ಮುಂದಿನ ಕ್ರಮಕ್ಕಾಗಿ ಬೊಲೆರೋ ವಾಹನ ಹಾಗೂ ಅದರಲ್ಲಿರುವ ಅಕ್ಕಿಯ ಚೀಲಗಳನ್ನು ಪೊಲೀಸ್…
