ಖಾನಾಪೂರ ಪ್ರಜಾಸೇವಾ ಆಂದೋಲನಕ್ಕೆಸ್ಥಳದಲ್ಲೇ ಅಹವಾಲು ಸ್ವೀಕರಿಸಿ ಪರಿಹಾರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಸೂಚನೆ
ಬೆಳಗಾವಿ ಜನರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನವನ್ನು ನಡೆಸಲಾಗುತ್ತಿದೆ. ಜನರ ಅಹವಾಲುಗಳಿಗೆ ಸ್ಪಂದಿಸುವಲ್ಲಿ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳು ತ್ವರಿತವಾಗಿ ಕ್ರಮವಹಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು ಖಾನಾಪುರದ ಲೋಕಮಾನ್ಯ ಟಿಳಕ ಭವನದಲ್ಲಿ ಸೋಮವಾರ ನಡೆದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರಲು ಅವಕಾಶ…
