ಬಾಗಲಕೋಟೆಯಲ್ಲಿ ಗಣಿ ಇಲಾಖೆ ನಿರ್ದೇಶಕರು ಸೇರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು.
ಬಾಗಲಕೋಟೆಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಪರಿಶೀಲನೆಯಲ್ಲಿ ಕಂಡುಬಂದ ಬೆನ್ನಲ್ಲೇ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಉಪ ಆಯುಕ್ತರು ಮತ್ತು ಐದು ತಾಲ್ಲೂಕುಗಳ ತಹಶೀಲ್ದಾರ್ಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರು, ಜಿಲ್ಲೆಯ ಉಪ ನಿರ್ದೇಶಕರು, ಉಪ ಆಯುಕ್ತರು ಮತ್ತು ಬಾದಾಮಿ, ಮುಧೋಳ, ಜಮಖಂಡಿ, ಹುನಗುಂದ ಮತ್ತು ಇಳಕಲ್ನ ತಹಶೀಲ್ದಾರ್ಗಳ ವಿರುದ್ಧ ಪ್ರಕರಣ ದಾಖಲಿಸಿದ್ದು ಲೋಕಾಯುಕ್ತರು ಬಾಗಲಕೋಟೆಯ ಪೊಲೀಸ್ ವರಿಷ್ಠಾಧಿಕಾರಿಗೆ ಸ್ಥಳ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ….
