ಬೆಲೆ ಏರಿಕೆ ವಿರುದ್ಧ ರಾಮದುರ್ಗದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಅಗತ್ಯ ವಸ್ತುಗಳ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಮದುರ್ಗ ಪಟ್ಟಣದ ತಾಲ್ಲೂಕು ಕಚೇರಿ ಬಳಿ ಶನಿವಾರ ಪ್ರತಿಭಟನೆ ನಡೆಸಿದರು. ಬೆಲೆ ಏರಿಕೆ-ತೆರಿಗೆ ಹೆಚ್ಚಳದ ಸರಕಾರದ ನೀತಿಗಳ ವಿರುದ್ಧ ಹಾಗೂ ಏರಿಸಿದ ಬೆಲೆಯನ್ನು ಹಿಂಪಡೆಯಲು ಆಗ್ರಹಿಸಿ, ಎಸ್.ಸಿ-ಎಸ್.ಟಿ ಮೀಸಲು ಹಣದ ದುರ್ಬಳಕೆಯನ್ನು ಖಂಡಿಸಿ ಮತ್ತು ಬಿಜೆಪಿಯ 18 ಶಾಸಕರ ಅಮಾನತನ್ನು ಖಂಡಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಇವರಿಗೆ ಮನವಿ ಸಲ್ಲಿಸಿದರು. ಬೆಲೆ ಏರಿಕೆಯಿಂದ ಜನರ ಮೇಲೆ ಹೊರೆ ಬಿದ್ದಿದೆ….
