ಬಾಗಲಕೋಟೆಯಲ್ಲಿ ಗಣಿ ಇಲಾಖೆ ನಿರ್ದೇಶಕರು ಸೇರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು.
ಬಾಗಲಕೋಟೆಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಪರಿಶೀಲನೆಯಲ್ಲಿ ಕಂಡುಬಂದ ಬೆನ್ನಲ್ಲೇ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಉಪ ಆಯುಕ್ತರು ಮತ್ತು ಐದು ತಾಲ್ಲೂಕುಗಳ ತಹಶೀಲ್ದಾರ್ಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರು, ಜಿಲ್ಲೆಯ ಉಪ ನಿರ್ದೇಶಕರು, ಉಪ ಆಯುಕ್ತರು ಮತ್ತು ಬಾದಾಮಿ, ಮುಧೋಳ, ಜಮಖಂಡಿ, ಹುನಗುಂದ ಮತ್ತು ಇಳಕಲ್ನ ತಹಶೀಲ್ದಾರ್ಗಳ ವಿರುದ್ಧ ಪ್ರಕರಣ ದಾಖಲಿಸಿದ್ದು ಲೋಕಾಯುಕ್ತರು ಬಾಗಲಕೋಟೆಯ ಪೊಲೀಸ್ ವರಿಷ್ಠಾಧಿಕಾರಿಗೆ ಸ್ಥಳ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ….
ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
ಕುಣಿಗಲ್: ನೀಟ್ ಪರೀಕ್ಷೆ ಅಕ್ರಮ, ವಿದ್ಯಾರ್ಥಿಗಳ ಆತ್ಮಹತ್ಯೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ ಚುಕ್ ಅವರೊಂದಿಗೆ ಕೇಂದ್ರ ಸರ್ಕಾರ ನಡೆದುಕೊಂಡ ರೀತಿಯನ್ನು ಖಂಡಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಕಾರ್ಯಕರ್ತರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸೋಮವಾರ ಪಟ್ಟಣದಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು. ವೇದಿಕೆ ರಾಜ್ಯ ಅಧ್ಯಕ್ಷ ಹೆಚ್.ಜಿ.ರಮೇಶ್ ಮಾತನಾಡಿ, ದೆಹಲಿಯ ಜಂತರ್ ಮಂತರ್ನಲ್ಲಿ ತಮ್ಮ…
ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ
ಕುಣಿಗಲ್ ತಾಲೂಕಿ ನಾದ್ಯಂತ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಸರ್ಕಾರಿ ಒಡೆತನದ ಕೆರೆ, ಕಟ್ಟೆ, ಹಳ್ಳಕೊಳ್ಳ ಹಾಗೂ ‘ಬಿ’ ಕರಾಬು ಜಮೀನುಗಳನ್ನು ಭೂಗಳ್ಳರಿಂದ ತಕ್ಷಣವೇ ವಶಪಡಿಸಿ ಕೊಳ್ಳಬೇಕೆಂದು ಆಗ್ರಹಿಸಿ ‘ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ’ಯಿಂದ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ. ಪಟ್ಟಣದ ಪ್ರವಾಸಿ ಮಂದಿರದಿಂದ ಮುಖಕ್ಕೆ ಕಪ್ಪು ಬಟ್ಟೆ ಧರಿಸಿ ಹೊರಟ ನೂರಾರು ಹೋರಾಟಗಾರರು. ತಾಲೂಕು ಹಾಗೂ ಜಿಲ್ಲಾ ಆಡಳಿತದ ನಿರ್ಲಕ್ಷ್ಯ ಧೋರಣೆ ವಿರುದ್ಧ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸಿಲ್ದಾರ್…
ಶಿವಾಜಿನಗರದಲ್ಲಿ ಜಿಬಿಎ ಅಧಿಕಾರಿಗಳ ಮೇಲೆ ಪುಂಡಾಟ: ಫುಟ್ಪಾತ್ ಒತ್ತುವರಿ ತೆರವು ವೇಳೆ ಹಲ್ಲೆ,
ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಗಂಭೀರ ಘಟನೆಯೊಂದು ನಡೆದಿದ್ದು, ಕಾಲುದಾರಿ (ಫುಟ್ಪಾತ್) ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳ ಮೇಲೆ ಕಿಡಿಗೇಡಿಗಳು ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಬೆಂಗಳೂರಿನ ಪಾದಚಾರಿಗಳ ಸುರಕ್ಷತೆಗಾಗಿ ಜಿಬಿಎ ಕೈಗೊಂಡಿರುವ ‘ಸುರಕ್ಷಿತ ಫುಟ್ಪಾತ್’ ಅಭಿಯಾನದ ಭಾಗವಾಗಿ ಶಿವಾಜಿನಗರ ಪ್ರದೇಶದಲ್ಲಿ ಒತ್ತುವರಿ ತೆರವುಗೊಳಿಸುವ ಕಾರ್ಯಚರಣೆ ನಡೆಯುತ್ತಿತ್ತು. ಈ ಸಮಯದಲ್ಲಿ ಸ್ಥಳೀಯ ರಸ್ತೆಬದಿ ವ್ಯಾಪಾರಿಗಳು ಹಾಗೂ ಕೆಲ ಕಿಡಿಗೇಡಿಗಳು ಕಾರ್ಯಾಚರಣೆಗೆ ಅಡ್ಡಿಪಡಿಸಿ, ಕರ್ತವ್ಯನಿರತ ಅಧಿಕಾರಿಗಳ ಮೇಲೆ ಏಕಾಏಕಿ ವಾಗ್ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು…
ಕಾಕತಿಯ ಸರಕಾರಿ ಪ್ರೌಢ ಶಾಲೆ ನಿಯೋಗದ ವತಿಯಿಂದ ಸಚಿವರ ಭೇಟಿ
ಬೆಳಗಾವಿ :ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಎಸ್ ಡಿ ಎಮ್ ಸಿ ಬಳಗದ ವತಿಯಿಂದ ಬುಧವಾರ ದಿ 21 ರಂದು ಬೆಳಗಾವಿಯ ಸಚಿವರ ಕಾರ್ಯಾಲಯದಲ್ಲಿ ಸನ್ಮಾನ್ಯ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ರವರನ್ನು ಭೇಟಿಯಾಗಿ ಶಾಲೆಯ ಬಗ್ಗೆ ಮತ್ತು ಶಾಲಾ ಕಟ್ಟಡ ಮತ್ತು ಇನ್ನುಳಿದ ತುರ್ತಾಗಿ ಬೇಕಿರುವ ಶಾಲಾ ವರ್ಗ ಕೊಠಡಿಗಳು, ಶೌಚಾಲಯ, ನೀರಿನ ಹೆಚ್ಚುವರಿ ಉಪಲಬ್ದತೆ ಸೌಲಭ್ಯ ಕುರಿತು ಚರ್ಚಿಸಲಾಯಿತು. ಸನ್ಮಾನ್ಯ ಸಚಿವರು ಶಾಲೆಗೆ ಖುದ್ದಾಗಿ ಭೇಟಿ ನೀಡಿ…
ಗಣಿ ಮತ್ತು ಭೂವಿಜ್ಞಾನ ಇಲಾಖೆ ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ: ಬರೋಬ್ಬರಿ 160 ಅಧಿಕಾರಿಗಳಿಗೆ ಟ್ರಾನ್ಸ್ಫರ್ ಭಾಗ್ಯ
ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮತ್ತು ಪಾರದರ್ಶಕತೆ ತರಲು ಸಿಎಂ ಡಿ.ಕೆ. ಶಿವಕುಮಾರ್ ಗಣಿ ಇಲಾಖೆಯ 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಇಲಾಖೆಯ ಇತಿಹಾಸದಲ್ಲೇ ಇದು ಅತಿದೊಡ್ಡ ಮೇಜರ್ ಸರ್ಜರಿಯಾಗಿದೆ. ದಶಕಗಳ ಕಾಲ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಸ್ವಂತ ಹಾಗೂ ನೆರೆಯ ಜಿಲ್ಲೆಗಳಲ್ಲಿ ಬೀಡು ಬಿಟ್ಟಿದ್ದ ಅಧಿಕಾರಿಗಳಿಗೆ ಟ್ರಾನ್ಸ್ಫರ್ ನೀಡಲಾಗಿದೆ. ಬೆಂಗಳೂರು, ಜುಲೈ 20: ಗಣಿ ಇಲಾಖೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೇಜರ್ ಸರ್ಜರಿ ಮಾಡಿದ್ದು, ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ್ದ ಇಲಾಖೆಯ ಶೇ.80ರಷ್ಟು ಸಿಬ್ಬಂದಿಯನ್ನು…
ಮಾದಕ ವಸ್ತುಗಳಿಂದ ದೂರವಿದ್ದು ಕುಟುಂಬ, ರಾಷ್ಟ್ರ ರಕ್ಷಣೆಗೆ ಮುಂದಾಗಬೇಕು: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ ಇಂದಿನ ಯುವ ಜನತೆ ಮಾದಕ ವಸ್ತುಗಳನ್ನು ದೂರವಿಟ್ಟು, ಆರೋಗ್ಯಕರ ಜೀವನವನ್ನು ನಡೆಸುವ ಮೂಲಕ ತಮ್ಮ ಕುಟುಂಬ ಮತ್ತು ದೇಶ ರಕ್ಷಣೆಗೆ ಮುಂದಾಗಬೇಕು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಯುವ ಸಮುದಾಯಕ್ಕೆ ಕರೆ ನೀಡಿದರು. ಪೋಲಿಸ್ ಇಲಾಖೆ ವತಿಯಿಂದ ನಗರದ ಸಂಗೋಳ್ಳಿ ರಾಯಣ್ಣ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಮಂಗಳವಾರ ಜರುಗಿದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ “ಬೇಡ ಬ್ರೋ” ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು….
ಧಾರವಾಡ ಎಸ್ಐಆರ್ ಪ್ರಕ್ರಿಯೇ ಶೀಘ್ರದಲ್ಲಿಯೇ ಪೂರ್ಣಗೊಳಿಸಿ: ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್
ಧಾರವಾಡ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಯಾದ ವಿ.ಅನ್ಬುಕುಮಾರ್ ಅವರು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಧಾರವಾಡ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಮನೆ-ಮನೆಗಳಿಗೆ ಭೇಟಿ ನೀಡಿ, ಗಣತಿ ನಮೂನೆಗಳನ್ನು (Enumeration Forms) ವಿತರಣೆ ಮಾಡುವ ಹಾಗೂ ಗಣಕೀಕರಣದ ಕುರಿತು ಪ್ರಗತಿ ಪರಿಶೀಲನೆ ಮಾಡಿ, ಮಾತನಾಡಿದರು. ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮತದಾರರ…
ಬೆಳಗಾವಿಯಲ್ಲಿ ಸಂಗೀತ ಸಂಜೆ
ಐ.ಎಂ. ಇ.ಆರ್ ಆಡಿಟೋರಿಯಂ ಬೆಳಗಾವಿಯಲ್ಲಿ ಸಂಗೀತ ಸಂಜೆ ಕಾರ್ಯಕ್ರಮವು ಉಚಿತ ಪ್ರವೇಶದೊಂದಿಗೆ ತುಂಬಾ ವಿದ್ಯುಕ್ತವಾಗಿ ಸಂಪನ್ನಗೊಂಡಿತು. ಆರಂಭದಲ್ಲಿ ಶ್ರೀಮತಿ ಎಸ್.ಜಾನಕಿ ಅಮ್ಮನವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಕಾರ್ಯಕ್ರಮ ಪ್ರಾರಂಭ ಮಾಡಲಾಗಿತ್ತು ಆರೋಹಿ ಮ್ಯೂಸಿಕ್ ಕ್ಲಾಸ್ ನಡೆಸುತ್ತಿರುವ ಶ್ರೀಮತಿ ಭಾರ್ಗವಿ ಕುಲಕರ್ಣಿಯವರು ಈ ಸಂಗೀತ ಸಂಜೆ ಕಾರ್ಯಕ್ರಮದ ಆಯೋಜಕತ್ವದ ಮುಖ್ಯಸ್ಥರು ಆಗಿದ್ದರು.ಕಲೆ ಎಂಬುದು ಯಾರೊಬ್ಬರ ಸ್ವತ್ತು ಅಲ್ಲ ಎಲೆಮರೆಯ ಕಾಯಿಯಂತೆ ಕಲೆಯನ್ನು ಪೋಷಿಸುವವರು ಸಾಕಷ್ಟು ಜನರಿದ್ದಾರೆ ಅವರಲ್ಲಿ ನಗರವಾಸಿಯಾದ ಶ್ರೀಮತಿ ಭಾರ್ಗವಿ ಕುಲಕರ್ಣಿಯವರು ಒಬ್ಬರಾಗಿದ್ದಾರೆ. ತಾವು ಕಲಿತ ವಿದ್ಯೆಯನ್ನು ಇನ್ನೊಬ್ಬರಿಗೆ…
ಎಸ್.ಐ.ಆರ್ ಪ್ರಕ್ರಿಯೆ ಕಾಲಮಿತಿಯೊಳಗೆ ಪೂರ್ಣಗೊಳಿಸಲು ರಾಜ್ಯ ಮುಖ್ಯಚುನಾವಣಾಧಿಕಾರಿ ಅನ್ಬುಕುಮಾರ್ ಸೂಚನೆ.
ಬೆಳಗಾವಿ / ಬೆಂಗಳೂರು,ಹೊಸ ಮತದಾರರ ಸೇರ್ಪಡೆ, ಮೃತಪಟ್ಟ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದುಹಾಕುವುದು, ವಿವರಗಳ ತಿದ್ದುಪಡಿ ಸೇರಿದಂತೆ ಮತದಾರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಶೇಕಡಾ 100% ರಷ್ಟು ಪೂರ್ಣಗೊಳಿಸಲು ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಮನೆಗೆ ಭೇಟಿ ನೀಡಿ ಮಾಹಿತಿ ಪರಿಶೀಲಿಸಬೇಕು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ಮತದಾರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (SIR) ಕುರಿತು ನಡೆದ ಪ್ರಗತಿ ಪರಿಶೀಲನಾ…
