ಬೀದಿ ಬದಿ ವ್ಯಾಪಾರಿಗಳು ಪಾಲಿಕೆ ಮಧ್ಯ ಸೌಹಾರ್ದತೆ ಅಗತ್ಯ : ಮೇಯರ್ ಪ್ರೀತಿ ಕಾಮಕರ್
ಬೆಳಗಾವಿ : ನಿಯಮಗಳನ್ನೂ ಪಾಲಿಸಿ ಸಾರ್ವಜನಿಕರ ಹಿತ ಕಾಪಾಡ ಬೇಕಾಗಿರುವುದರಿಂದಬೀದಿ ಬದಿ ವ್ಯಾಪಾರಿಗಳು ಪಾಲಿಕೆಗೆ ಸಹಕಾರ ನೀಡಿಸೌಹಾರ್ದತೆ ಕಾಪಾಡಿಕೊಳ್ಳಬೇಕೆಂದು ಮೇಯರ್ ಪ್ರೀತಿ ಕಾಮಕರ್ ಹೇಳಿದರು. ಮಂಗಳವಾರ ಮಹಾನಗರ ಪಾಲಿಕೆಯಲ್ಲಿ ನಡೆದ ತಾತ್ಕಾಲಿಕ ಪಟ್ಟಣ ಮಾರಾಟ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಪುಟ್ಪಾತ್ಗಳನ್ನು ಸಂಚಾರಕ್ಕಾಗಿ ಮುಕ್ತಗೊಳಿಸುವ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶವಿದೆ. ಈ ಹಿನ್ನೆಲೆಯಲ್ಲಿ ನಿಯಮವನ್ನೂ ಪಾಲಿಸಬೇಕು, ಬೀದಿಬದಿ ವ್ಯಾಪಾರಿಗಳ ಹಿತವನ್ನೂ ಕಾಪಾಡಬೇಕಾಗಿರುವುದರಿಂದ ನಗರ ಸೇವಕರು, ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಸಹಕಾರದಿಂದ…
