ಹಲಗತ್ತಿ ಎಸ್.ಐ.ಆರ್. ನೂರಕ್ಕೆ ನೂರರಷ್ಟು ಸಾಧನೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿಹಲಗತ್ತಿ BLO ಮತ್ತು BLA ರವರ ಸಭೆಯನ್ನು ಎಸ್ ಎಸ್ ಗೋರವನಕೊಳ್ಳ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಹಲಗತ್ತಿ ಗ್ರಾಮದ ಮೂರು ವಾರ್ಡಿನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯವನ್ನು ನೂರಕ್ಕೆ ನೂರರಷ್ಟು ಯಶಸ್ವಿಯಾಗಿ ಮುಗಿಸಿದ ಹಲಗತ್ತಿ ಗ್ರಾಮದಬಿ ಎಲ್ ಓ ಗಳಾದ ಎಸ್ ಜಿ ರಾಠೋಡ, ಎಸ್ ಎಸ್ ಸಜ್ಜನ, ಬಿ ಎಂ ವಾಲಿಕಾರ, ವ್ಹಾ ಎಸ್ ಪಾಟೀಲ, ಅಂಗನವಾಡಿ…
‘ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಕೂಲಿಕಾರರಿಗೆ ನಿರಂತರವಾಗಿ ಕೆಲಸ ಒದಗಿಸಿ: ಜಿಪಂ ಸಿಇಒ ರಾಹುಲ್ ಶಿಂಧೆ
ಬೆಳಗಾವಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೂಲಿಕಾರರಿಗೆ ನಿರಂತರವಾಗಿ ಕೂಲಿ ಕೆಲಸ ಒದಗಿಸಬೇಕು ಎಂದು ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಗತಿ ಕುರಿತು ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ವಿಡಿಯೋ ಸಂವಾದ ಸಭೆಯ…
ವಿಮುಕ್ತ ದೇವದಾಸಿ ತಾಯಂದಿರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ
ಗದಗ ವಿಮುಕ್ತ ದೇವದಾಸಿ ತಾಯಂದಿರ ಸಮಗ್ರ ಅಭಿವೃದ್ಧಿ ಹಾಗೂ ಸಬಲೀಕರಣಕ್ಕಾಗಿ ಸರಕಾರ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ವಿಮುಕ್ತ ದೇವದಾಸಿ ತಾಯಂದಿರ ಮಹಾ ಒಕ್ಕೂಟ ಕರ್ನಾಟಕ ಹಾಗೂ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ಗದಗ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.ದೇವದಾಸಿ ಪದ್ಧತಿಯಿಂದ ವಿಮುಕ್ತರಾದ ಮಹಿಳೆಯರು ಹಾಗೂ ಅವರ ಮಕ್ಕಳು ಇಂದಿಗೂ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. 2024-25ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಘೋಷಿಸಲಾದ ವಿಶೇಷ ಪ್ಯಾಕೇಜ್…
ಸಿಎಂ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆ
ದೆಹಲಿ ಜಲಸಂಪನ್ಮೂಲ ಇಲಾಖೆಯನ್ನು ಹೊರತುಪಡಿಸಿ ಕೇಂದ್ರ ಸರ್ಕಾರದಿಂದ ಬಾಕಿ ಇರುವ ಪ್ರಮುಖ ಯೋಜನೆಗಳಿಗೆ ಅನುಮೋದನೆ, ಅನುದಾನಗಳು ಸೇರಿದಂತೆ ಒಟ್ಟು 13 ಅಂಶಗಳ ಬಗ್ಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ಸಚಿವರು ಹಾಗೂ ರಾಜ್ಯದ ಸಂಸದರ ಜತೆ ಚರ್ಚೆ ನಡೆಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸೋಮವಾರ ಸಿಎಂ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಸಂಸದರ ಜೊತೆಗಿನ ಸಭೆಯಲ್ಲಿ ಈ ಯೋಜನೆಗಳ ಅನುಮೋದನೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಮಾಡಲಾಯಿತು. “ರಾಜ್ಯದ…
ಯುವಜನತೆಯನ್ನು ಮಾದಕ ವಸ್ತುಗಳ ವ್ಯಸನಗಳಿಂದ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್
ಬೆಳಗಾವಿ ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ದೇಶದ ಯುವಜನತೆಯನ್ನು ಮಾದಕ ವಸ್ತುಗಳ ವ್ಯಸನಗಳಿಂದ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಅವರು ಹೇಳಿದರು. ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ…
ಕರ್ನಾಟಕ ರಾಜ್ಯ ಪಿಡಿಒ ‘ಬಿ’ ಗ್ರೇಡ್ ಹುದ್ದೆ ಉನ್ನತೀಕರಣ ಸಂಘ ರಾಮದುರ್ಗ ತಾಲ್ಲೂಕು ಘಟಕದ ವತಿಯಿಂದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಪಂಚಾಯಿತಿ, ರಾಮದುರ್ಗ ಇವರಿಗೆ ಮನವಿ ಸಲ್ಲಿಸಿದರು
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕು ಪಂಚಾಯತ್ ಸಭಾಭವನದಲ್ಲಿ ತಾಲೂಕಿನ ಕರ್ನಾಟಕ ರಾಜ್ಯ ಪಿಡಿಒ ‘ಬಿ’ ಗ್ರೇಡ್ ಹುದ್ದೆ ಉನ್ನತೀಕರಣ ಸಂಘ ರಾಮದುರ್ಗ ತಾಲ್ಲೂಕು ಘಟಕದ ವತಿಯಿಂದ ವಿಬಿಜಿ ರಾಮ್ ಜಿ’ ಯೋಜನೆಯಡಿ ಕೆರೆ/ನಾಲಾ ಹೂಳೆತ್ತುವಿಕೆ, 5 ಲಕ್ಷದೊಳಗಿನ ಕಾಮಗಾರಿಗಳಿಗೆ ಟೆಂಡರ್ ವಿನಾಯಿತಿ ಹಾಗೂ ಇತರೆ ಕಾಮಗಾರಿಗಳ ಕುರಿತು ತಾಲ್ಲೂಕಿನ ಎಲ್ಲಾ ಪಿಡಿಒಗಳಿಗೆ ಅನ್ವಯಿಸುವಂತೆ ಸ್ಪಷ್ಟಿಕರಣ ಮಾರ್ಗದರ್ಶನ ನೀಡಲು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಪಂಚಾಯಿತಿ, ರಾಮದುರ್ಗ ಇವರಿಗೆ ಮನವಿ ಸಲ್ಲಿಸಿದರು ಕರ್ನಾಟಕ ರಾಜ್ಯ ಪಿಡಿಒ ‘ಬಿ’ ಗ್ರೇಡ್…
ಬೆಳಗಾವಿ ಸಾಧಕ BLOಗಳ ಮನೆಗೆ ತೆರಳಿ ಗೌರವಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಿಕ್ಷಕರು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಎಂದುಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.ಎಸ್ ಐ ಆರ್ ಕಾರ್ಯದಲ್ಲಿ ಶೇ.ನೂರರಷ್ಟು ಪ್ರಗತಿ ಸಾಧಿಸಿರುವ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿ, ಸತೀಶ ಢವಳೆ ಅವರ ಶಹಾಪೂರ ಬಸವಣ್ಣ ಗಲ್ಲಿಯ ಮನೆಗೆ ಗುರುವಾರ ಖುದ್ದು ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಢವಳೆ ಹಾಗೂ ಇತರ ಸಾಧಕ ಬಿಎಲ್ಓ ಗಳನ್ನು ಸನ್ಮಾನಿಸಿ ಮಾತನಾಡಿದರು.ಈಗಾಗಲೇ ನಾನು ಮಾತು ಕೊಟ್ಟಿರುವಂತೆ ಸಾಧಕ…
ಬಾಗಲಕೋಟೆಯಲ್ಲಿ ಗಣಿ ಇಲಾಖೆ ನಿರ್ದೇಶಕರು ಸೇರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು.
ಬಾಗಲಕೋಟೆಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಪರಿಶೀಲನೆಯಲ್ಲಿ ಕಂಡುಬಂದ ಬೆನ್ನಲ್ಲೇ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಉಪ ಆಯುಕ್ತರು ಮತ್ತು ಐದು ತಾಲ್ಲೂಕುಗಳ ತಹಶೀಲ್ದಾರ್ಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರು, ಜಿಲ್ಲೆಯ ಉಪ ನಿರ್ದೇಶಕರು, ಉಪ ಆಯುಕ್ತರು ಮತ್ತು ಬಾದಾಮಿ, ಮುಧೋಳ, ಜಮಖಂಡಿ, ಹುನಗುಂದ ಮತ್ತು ಇಳಕಲ್ನ ತಹಶೀಲ್ದಾರ್ಗಳ ವಿರುದ್ಧ ಪ್ರಕರಣ ದಾಖಲಿಸಿದ್ದು ಲೋಕಾಯುಕ್ತರು ಬಾಗಲಕೋಟೆಯ ಪೊಲೀಸ್ ವರಿಷ್ಠಾಧಿಕಾರಿಗೆ ಸ್ಥಳ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ….
ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
ಕುಣಿಗಲ್: ನೀಟ್ ಪರೀಕ್ಷೆ ಅಕ್ರಮ, ವಿದ್ಯಾರ್ಥಿಗಳ ಆತ್ಮಹತ್ಯೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ ಚುಕ್ ಅವರೊಂದಿಗೆ ಕೇಂದ್ರ ಸರ್ಕಾರ ನಡೆದುಕೊಂಡ ರೀತಿಯನ್ನು ಖಂಡಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಕಾರ್ಯಕರ್ತರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸೋಮವಾರ ಪಟ್ಟಣದಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು. ವೇದಿಕೆ ರಾಜ್ಯ ಅಧ್ಯಕ್ಷ ಹೆಚ್.ಜಿ.ರಮೇಶ್ ಮಾತನಾಡಿ, ದೆಹಲಿಯ ಜಂತರ್ ಮಂತರ್ನಲ್ಲಿ ತಮ್ಮ…
ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ
ಕುಣಿಗಲ್ ತಾಲೂಕಿ ನಾದ್ಯಂತ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಸರ್ಕಾರಿ ಒಡೆತನದ ಕೆರೆ, ಕಟ್ಟೆ, ಹಳ್ಳಕೊಳ್ಳ ಹಾಗೂ ‘ಬಿ’ ಕರಾಬು ಜಮೀನುಗಳನ್ನು ಭೂಗಳ್ಳರಿಂದ ತಕ್ಷಣವೇ ವಶಪಡಿಸಿ ಕೊಳ್ಳಬೇಕೆಂದು ಆಗ್ರಹಿಸಿ ‘ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ’ಯಿಂದ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ. ಪಟ್ಟಣದ ಪ್ರವಾಸಿ ಮಂದಿರದಿಂದ ಮುಖಕ್ಕೆ ಕಪ್ಪು ಬಟ್ಟೆ ಧರಿಸಿ ಹೊರಟ ನೂರಾರು ಹೋರಾಟಗಾರರು. ತಾಲೂಕು ಹಾಗೂ ಜಿಲ್ಲಾ ಆಡಳಿತದ ನಿರ್ಲಕ್ಷ್ಯ ಧೋರಣೆ ವಿರುದ್ಧ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸಿಲ್ದಾರ್…
