ಕುಡಿಯುವ ನೀರಿಗಾಗಿ ಗ್ರಾಮೀಣ ಪ್ರದೆಶದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ
ಬೆಳಗಾವಿ, ಮುಂಗಾರು ಮಳೆಯ ಕೊರತೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಗ್ರಾಮೀಣ ಪ್ರದೆಶದ ಎಲ್ಲ ಶಾಸಕರಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು. ಸರಕಾರದ ಮಾರ್ಗಸೂಚಿ ಪ್ರಕಾರ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅನುದಾನವನ್ನು ಬಳಕೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ (ಜು.09) ಜರುಗಿದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆ ಕಡಿಮೆಯಾಗಿರುವ ಜಿಲ್ಲೆಗಳಲ್ಲಿ…
