ಶಿವಾಜಿನಗರದಲ್ಲಿ ಜಿಬಿಎ ಅಧಿಕಾರಿಗಳ ಮೇಲೆ ಪುಂಡಾಟ: ಫುಟ್‌ಪಾತ್ ಒತ್ತುವರಿ ತೆರವು ವೇಳೆ ಹಲ್ಲೆ,
ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಗಂಭೀರ ಘಟನೆಯೊಂದು ನಡೆದಿದ್ದು, ಕಾಲುದಾರಿ (ಫುಟ್‌ಪಾತ್) ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳ ಮೇಲೆ ಕಿಡಿಗೇಡಿಗಳು ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಬೆಂಗಳೂರಿನ ಪಾದಚಾರಿಗಳ ಸುರಕ್ಷತೆಗಾಗಿ ಜಿಬಿಎ ಕೈಗೊಂಡಿರುವ ‘ಸುರಕ್ಷಿತ ಫುಟ್‌ಪಾತ್’ ಅಭಿಯಾನದ ಭಾಗವಾಗಿ ಶಿವಾಜಿನಗರ ಪ್ರದೇಶದಲ್ಲಿ ಒತ್ತುವರಿ ತೆರವುಗೊಳಿಸುವ ಕಾರ್ಯಚರಣೆ ನಡೆಯುತ್ತಿತ್ತು. ಈ ಸಮಯದಲ್ಲಿ ಸ್ಥಳೀಯ ರಸ್ತೆಬದಿ ವ್ಯಾಪಾರಿಗಳು ಹಾಗೂ ಕೆಲ ಕಿಡಿಗೇಡಿಗಳು ಕಾರ್ಯಾಚರಣೆಗೆ ಅಡ್ಡಿಪಡಿಸಿ, ಕರ್ತವ್ಯನಿರತ ಅಧಿಕಾರಿಗಳ ಮೇಲೆ ಏಕಾಏಕಿ ವಾಗ್ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು…
