ಕಟಕೋಳ ಸಮುದಾಯ ಆರೋಗ್ಯ ಸಹಕಾರಿ ದವಾಖಾನೆ ಸ್ಥಾಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶಾಸಕರು, ಅಶೋಕ ಮ ಪಟ್ಟಣ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಡವರು, ರೈತರು, ಕೂಲಿ ಕಾರ್ಮಿಕರು ಹಾಗೂ ಸಾಮಾನ್ಯ ಜನರು ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ.ಆದ್ದರಿಂದ ನಮ್ಮ ಪ್ರದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಸಮುದಾಯ ಆರೋಗ್ಯ ಸಹಕಾರಿ ದವಾಖಾನೆಯನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿ, ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ವೈದ್ಯಕೀಯ ಸೇವೆ, ಔಷಧಿ, ಪ್ರಯೋಗಾಲಯ ಪರೀಕ್ಷೆ ಹಾಗೂ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸುವಂತೆದವಾಖಾನೆಯಲ್ಲಿ ಅಗತ್ಯವಿರುವ…
ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ
ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಯರಗಟ್ಟಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸತ್ತಿಗೇರಿಯಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ರವರು ಸಸಿಗೆ ನೀರೆಯುವುದರ ಮೂಲಕ ಉದ್ಫಾಟನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಕಾನೂನು ಎಲ್ಲರಿಗೂ ಸಮಾನವಾಗಿದ್ದು ಕಾನೂನಿನ ಅಡಿಯಲ್ಲಿ ವ್ಯವಸ್ಥಿತವಾದ ಜೀವನ ನಡೆಸಿದರೆ ಮಾತ್ರ…
ರಾಮದುರ್ಗ ತಾಲೂಕಾ ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಫರ್ ಅಸೋಶಿಯೇಷನ್ 20ನೇ ವಾರ್ಷಿಕೋತ್ಸವ ಹಾಗೂ 187ನೇ ವಿಶ್ವ ಛಾಯಾಗ್ರಹನ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಅಶೋಕ ಮ. ಪಟ್ಟಣ ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರ ಗ್ರಾಮದ ವಿಶ್ವೇಶ್ವರಯ್ಯ ಕಲ್ಯಾಣ ಮಂಟಪದಲ್ಲಿ ರವಿವಾರರಂದು ರಾಮದುರ್ಗ ತಾಲೂಕಾ ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಫರ್ ಅಸೋಶಿಯೇಷನ್ 20ನೇ ವಾರ್ಷಿಕೋತ್ಸವ ಹಾಗೂ 187ನೇ ವಿಶ್ವ ಛಾಯಾಗ್ರಹನ ದಿನಾಚರಣೆ ಕಾರ್ಯಕ್ರಮವನ್ನು ಕರ್ನಾಟಕ ಸರಕಾರ ಮುಖ್ಯ ಸಚೇತಕರು, ಶಾಸಕರು ವಿಧಾನಸಭಾ ಕ್ಷೇತ್ರ ರಾಮದುರ್ಗ ಅಶೋಕ ಮ. ಪಟ್ಟಣ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು ಮೊಬೈಲ್ ಕ್ಯಾಮೆರಾ ಮತ್ತು ಎಐ (AI) ತಂತ್ರಜ್ಞಾನದಿಂದ ಫೋಟೋಗ್ರಾಫಿ ಅನ್ನೋದು ಹೋಗಿಬಿಟ್ಟಿದೆ. ಸಣ್ಣಪುಟ್ಟ ಕಾರ್ಯಕ್ರಮಗಳು, ಪಾಸ್‌ಪೋರ್ಟ್ ಸೈಜ್ ಫೋಟೋಗಳು…
ರಾಮದುರ್ಗದಲ್ಲಿ ಶಾಂತಿಯಿಂದ ಈದ್ ಮಿಲಾದ್ ಆಚರಿಸಿ : ಸಿಪಿಐ ವಿನಾಯಕ್ ಬಡಿಗೇರ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಅವರಣದಲ್ಲಿ ಶನಿವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಸಮಾಜದ ಮುಖಂಡರ ಸಮ್ಮುಖದಲ್ಲಿ ಜರುಗಿದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆಯನ್ನು ಸಿಪಿಐ ವಿನಾಯಕ್ ಬಡಿಗೇರ್ ವಹಿಸಿ ಅವರು ಮಾತನಾಡಿದರು. ಪ್ರವಾದಿ ಮಹಮ್ಮದ ಅವರ ಸಂದೇಶ ಸಾರಲು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗುವ ಧಾರ್ಮಿಕ ಮೆರವಣಿಗೆಯನ್ನು ಅರ್ಥಪೂರ್ಣವಾಗಿ ನೆರವೇರಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವನ್ನು ಕಲ್ಪಿಸದೇ ಈದ್ ಮಿಲಾದ್ ಹಬ್ಬವನ್ನು ಪ್ರತಿಯೊಬ್ಬರೂ ಶಾಂತ ರೀತಿಯಿಂದ ಸೌಹಾರ್ದಯುತವಾಗಿ ಆಚರಣೆ ಮಾಡಬೇಕು.ಹಬ್ಬಗಳನ್ನು ಶಾಂತಿಯಿಂದ…
₹8.04 ಕೋಟಿ ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗೆ ಹೊಸ ರೂಪ-ರೋಬೋಟಿಕ್ ಮತ್ತು ಭಾಷಾ ಪ್ರಯೋಗಾಲಯ ಉದ್ಘಾಟನೆ
ಬೆಳಗಾವಿ ನಗರದ ಕಾಕತಿವೇಸ್ ನಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ(ಸರದಾರ ಪ್ರೌಢಶಾಲೆ)ಯ ಮೂಲಸೌಕರ್ಯ ಬಲಪಡಿಸುವುದರ ಜತೆಗೆ, ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ರೋಬೋಟಿಕ್, ಭಾಷಾ ಹಾಗೂ ವರ್ಚುವಲ್ ಪ್ರಯೋಗಾಲಯಗಳನ್ನು ಶಾಸಕ ಆಸಿಫ್(ರಾಜು) ಸೇಠ್ ಅವರು ಶನಿವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ 2025-26ನೇ ಸಾಲಿನ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳ ಪೈಕಿ ₹5 ಕೋಟಿ ವೆಚ್ಚದಲ್ಲಿ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ಕೂಡ ನೆರವೇರಿಸಲಾಯಿತು. ನಂತರ ಮಾತನಾಡಿದ ಶಾಸಕ ಸೇಠ್ ಅವರು, ಶಾಸಕ…
ಪುನರ್ವಸತಿಗಾಗಿ ದೇವದಾಸಿ ತಾಯಂದಿರ ಬೃಹತ್ ಪ್ರತಿಭಟನೆ
ಬೆಂಗಳೂರು ಸರ್ಕಾರದ ಭರವಸೆಗಳು ಹಾಗೂ ಬಜೆಟ್ ಘೋಷಣೆಗಳು ಅನುಷ್ಠಾನಗೊಳ್ಳದೆ ವರ್ಷಗಳು ಕಳೆದರೂ ತಮ್ಮ ಬದುಕಿನಲ್ಲಿ ಬದಲಾವಣೆ ಕಾಣದ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಾಜಿ ದೇವದಾಸಿ ತಾಯಂದಿರು ಗುರುವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ವಿಮುಕ್ತ ದೇವದಾಸಿ ತಾಯಂದಿರ ಮಹಾ ಒಕ್ಕೂಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳೆಯರು ತಮ್ಮ ಹಕ್ಕು, ಗೌರವ ಮತ್ತು ಸಾಮಾಜಿಕ ಭದ್ರತೆಗಾಗಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದರು. ಸಾವಿರಾರು ಮಹಿಳೆಯರ ಬೃಹತ್ ಸಮಾವೇಶದಿಂದ ಫ್ರೀಡಂ ಪಾರ್ಕ್ ಹೋರಾಟದ ಕೇಂದ್ರಬಿಂದುವಾಗಿತ್ತು….
ಜಾಗೃತಿ ಯೋಜನೆ 2025 ರ ಅಡಿಯಲ್ಲಿ ಯುವ ಶಕ್ತಿಯಿಂದ ಸಭಲ ಭಾರತ “ದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಶ್ರೀಮತಿ. ಪುಷ್ಪಲತಾ. ಕೆ ಅವರು ಉದ್ಘಾಟಿಸಿದರು.
ರಾಮದುರ್ಗ ಸ್ವಚ್ಛತೆಯ ಬಗ್ಗೆ ಬೇಜಾರ ವ್ಯಕ್ತಪಡಿಸಿದ ನ್ಯಾಯಾಧೀಶರು ಮಲಪ್ರಭಾ ನದಿಯು ನಮ್ಮ ಭಾಗದ ಜೀವಾಳ ಮತ್ತು ಅಮೂಲ್ಯವಾದ ಆಸ್ತಿ. ಅದನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ನ್ಯಾಯಾಧೀಶರು ಶ್ರೀಮತಿ. ಪುಷ್ಪಲತಾ. ಕೆ ಹೇಳಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಮದುರ್ಗದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ,ರಾಮದುರ್ಗ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬೆಳಗಾವಿ ಮತ್ತು ತಾಲೂಕು ಕಾನೂನು ಸೇವಾ ಸಮಿತಿ, ರಾಮದುರ್ಗ, ನ್ಯಾಯವಾದಿಗಳ…
ಬರಗಾಲ ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ರಾಮದುರ್ಗ ತಾಲೂಕಿನಲ್ಲಿ ಉಂಟಾಗಿರುವ ಭೀಕರ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಸರ್ಕಾರದ ನೆರವು ನೀಡುವದು ಹಾಗೂ ಬರಗಾಲ ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕ ಅಶೋಕ ಪಟ್ಟಣ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಮದುರ್ಗ ತಾಲೂಕಿನಲ್ಲಿ ಈ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ತಮ್ಮ ಜಮೀನುಗಳಲ್ಲಿ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ…
ಮಲಪ್ರಭಾ ಯೋಜನೆ 2026-27 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆ
ಬೆಳಗಾವಿ ಪ್ರಸ್ತುತ ಜಲಾಶಯದಲ್ಲಿರುವ ನೀರಿನ ಸಂಗ್ರಹ, ಮಳೆಯ ಪ್ರಮಾಣ ಮತ್ತು ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೀರಿನ ಅಗತ್ಯವನ್ನು ಪರಿಗಣಿಸಿ ನೀರು ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು. ರಾಮದುರ್ಗ ತಾಲೂಕಿನ ಚಂದರಗಿ ಕ್ರೀಡಾ ಶಾಲೆಯ ಸಭಾಂಗಣದಲ್ಲಿ ರವಿವಾರ (ಆ.16) ನಡೆದ ಮಲಪ್ರಭಾ ಯೋಜನೆ 2026-27 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಲಪ್ರಭಾ ಜಲಾಶಯದಲ್ಲಿ ಲಭ್ಯವಿರುವ…
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಲ್ಲಾಪುರದಲ್ಲಿ ವಿಜೃಂಭಣೆಯಿಂದ 80ನೇ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಿರಸಂಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು. ಈ ಸಮಾರಂಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಎಂಸಿ ಸದಸ್ಯರಾದ ಬಸವರಾಜ ಕಡುಕೊಳ ಅವರು ” ಗ್ರಾಮಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ಮನೆಯಿಂದ ಇಂತಿಷ್ಟು ಹಣವನ್ನು ಸಂಗ್ರಹಿಸುತ್ತವೆ, ಸಂಗ್ರಹಿಸಿದ ಈ ಹಣದಲ್ಲಿ ಶಾಲೆ ಅಭಿವೃದ್ಧಿಗೆ 5 ರಿಂದ 10% ನೀಡಿ, ಶಾಲೆಯ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ತಿಳಿಸಿದರು. ಹಾಗೂ ಈ ಕಾರ್ಯಕ್ರಮದಲ್ಲಿ ಶಾಳೆಯ ಸೇವಾದಳದ ವಿದ್ಯಾರ್ಥಿಗಳಿಗೆ…
