16ನೇ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ₹15,111ಕೋಟಿ ಮೂಲ ಅನುದಾನ, ₹3,778 ಕೋಟಿ ಕಾರ್ಯ ಸಾಮರ್ಥ್ಯ ಅನುದಾನ ಸೇರಿ ₹18,889 ಕೋಟಿ ಹಣವು ಮುಂದಿನ 5 ವರ್ಷಗಳಿಗೆ ಹಂಚಿಕೆ ಆಗಿದೆ.
ನವದೆಹಲಿ : ರಾಜ್ಯಕ್ಕೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ಬಾಕಿ ಇರುವ ₹2186 ಕೋಟಿ ಕೂಡಲೇ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿಂದು ನಡೆದ 16ನೇ ಹಣಕಾಸು ಆಯೋಗದ ಶಿಫಾರಸು, ಕಾರ್ಯಾಚರಣೆ ಮಾರ್ಗಸೂಚಿಗಳು, ಅನುದಾನ ಬಿಡುಗಡೆ ಪ್ರಕ್ರಿಯೆ, ಅನುಸರಣೆ ಷರತ್ತುಗಳು, ಪ್ರಮುಖ ಸವಾಲುಗಳು ಮತ್ತು ಅವುಗಳಿಗೆ ಪರಿಹಾರ ಕುರಿತಂತೆ ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಸಮಾವೇಶದಲ್ಲಿ…
