ಕೆಲಸದ ಸಮಯದಲ್ಲಿ ಪಾರ್ಟಿ ಮಾಡಿದ 6 ಪಿಡಿಒ, ಇಬ್ಬರು ಕಾರ್ಯದರ್ಶಿ, ಎಸ್ ಡಿಎ ಅಮಾನತು
ಬೆಂಗಳೂರು : ಕೆಲಸದ ಅವಧಿ ಗ್ರಾ.ಪಂ. ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ ಮಾಧ್ಯಮ ವರದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ 6 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ ಮತ್ತು ಒಬ್ಬ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶುಕ್ರವಾರ (ಜು.24ರಂದು) ಸಂಜೆ ಸಿದ್ದರಬೆಟ್ಟದ ಬಳಿ ಮದ್ಯ, ಮಾಂಸ ಸೇವಿಸಿ ಮೋಜು ಮಸ್ತಿ ಮಾಡಿದ ಬಗ್ಗೆ…
