ಗೃಹಲಕ್ಷ್ಮಿ ಅರ್ಹ ಫಲಾನುಭವಿಗಳಿಗೆ ಬಯೋಮೆಟ್ರಿಕ್ ಮರುಪರಿಶೀಲನೆ
ಧಾರವಾಡ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳ ಬಯೋಮೆಟ್ರಿಕ್ ದೃಢೀಕರಿಸುವ ಮೂಲಕ ಮರುಪರಿಶೀಲನೆ ನಡೆಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನ ಜಾರಿಗೆ ತರಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು. ಗೃಹಲಕ್ಷ್ಮಿ ಫಲಾನುಭವಿಗಳ ವಿವರಗಳನ್ನು ಪರಿಶೀಲಿಸಿ, ಅವರ ಪ್ರಸ್ತುತ ಸ್ಥಿತಿಯನ್ನು ದೃಢಿಕರಿಸುವ ಉದ್ದೇಶದಿಂದ ಫಲಾನುಭವಿಗಳ ಮರುಪರಿಶೀಲನಾ ಕಾರ್ಯವನ್ನು ನಿಯೋಜಿತ ಗಣತಿದಾರರು (Enumerators)…
