BREAKING NEWS

ಬೆಳಗಾವಿ ಬಿಮ್ಸ್ ಗೆ ಭೇಟಿ ನೀಡಿದ ಉಪ ಲೋಕಾಯುಕ್ತರು

ಬೆಳಗಾವಿ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರಬೆಳಗಾವಿಯ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅನೀರಿಕ್ಷಿತ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿನ ನೋಂದಣಿ‌ ಕೌಂಟರ, ಶುದ್ಧ ಕುಡಿಯುವ ನೀರು, ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳ ಮಾಹಿತಿ ಪಡೆದು, ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ತದನಂತರ ಒಳ ರೋಗಿಗಳ ವಿಭಾಗ, ತೀವ್ರ ನಿಗಾ ಘಟಕ, ಪ್ರಸೂತಿ ವಿಭಾಗ,ಸೇರಿದಂತೆ ವಿವಿಧ‌ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಆಸ್ಪತ್ರೆಯಲ್ಲಿ ದಾಖಾಲಗಿರುವ ರೋಗಿಗಳೊಂದಿಗೆ ಮಾತನಾಡಿದ…

Read More

ಮಹಾನಗರ ಪಾಲಿಕೆಗೆ ಭೇಟಿಬೀದಿದೀಪ ನಿರ್ವಹಣೆ: ನಾಗರಿಕರಿಂದ ದೂರು ಬಂದರೆ ಕಠಿಣ ಕ್ರಮ: ಉಪ ಲೋಕಾಯುಕ್ತ ಬಿ.ವೀರಪ್ಪ

ಬೆಳಗಾವಿ ಉಪ ಲೋಕಾಯುಕ್ತರಾಗಿರುವ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರಬೆಳಗಾವಿ ಮಹಾನಗರ ಪಾಲಿಕೆಗೆ ಭೇಟಿ ನೀಡಿ ಪಾಲಿಕೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಮಹಾನಗರ ಪಾಲಿಕೆಗೆ ಭೇಟಿ ನೀಡಿದ ಪಾಲಿಕೆಯ ಸಿಬ್ಬಂದಿಗಳ ಹಾಜರಾತಿ, ನಗದು ವಹಿ, ಚಲನವಲನ ವಹಿಗಳನ್ನು ಮಾಹಿತಿ ಪಡೆದು ಪರಿಶೀಲಿಸಿದ ಅವರು ಹಾಜರಾತಿ ವಹಿಯನ್ನು ಸರಿಯಾಗಿ ನಿರ್ವಹಿಸದೆ ಇರುವುದರ ಕುರಿತು ಪ್ರಶ್ನಿಸಿದರು. ಬೆಳಗ್ಗೆ ಹಾಗೂ ಸಂಜೆ ಕಡ್ಡಾಯವಾಗಿ ಹಾಜರಾತಿ ಹಾಕುವಂತೆ ಸೂಚಿಸಿದರು. ಕಳೆದ ಮೂರು ತಿಂಗಳುಗಳ ಸಿಬ್ಬಂದಿಗಳ ಹಾಜರಾತಿ ವಿವರ ಹಾಗೂ ವಿವಿಧ ಶಾಖೆಗಳ ಮುಖ್ಯಸ್ಥರ ಮೂರು…

Read More

ಉಡಚಮ್ಮನಗರ ಗ್ರಾಮದ ಕುಡಿಯುವ ನೀರಿನ ಸಮಸ್ಯೆಗೆ ವಿಜಯ ಸೇನೆ ಪರಿಹಾರ ದೊರಕಿಸಿಕೊಟ್ಟಿದೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಂಗಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಉಡಚಮ್ಮನಗರ ಗ್ರಾಮದಲ್ಲಿ ಬಹಳ ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಇತ್ತು. ಇದರ ಬಗ್ಗೆ ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತಂದರು ಕೂಡ ಇವತ್ತು ಸರಿ ಮಾಡುತ್ತೇವೆ ನಾಳೆ ಸರಿ ಮಾಡಿಕೊಡುತ್ತೇವೆ ಎಂದು ಹೇಳುತ್ತಾ ಬಂದಿರುತ್ತಾರೆ. ಕೆಲವು ದಿನಗಳ ಹಿಂದೆ ರಾಮದುರ್ಗದ ವಿಜಯ ಸೇನಾ ಸಮಿತಿಗೆ ಬಂದ ದೂರಿನ ಹಿನ್ನೆಲೆ ವಿಜಯ ಸೇನಾ ಸಮಿತಿ ಸಂಸ್ಥಾಪಕ ವಿಜಯ ನಾಯಕ್ ಅವರು ಕಾರ್ಯ ಪ್ರವೃತ್ತರಾಗಿದ್ದರು ಇಂದು ಆ ಊರಿನ…

Read More

ಬೆಳಗಾವಿವಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣಕ್ಕೆ ಉಪ ಲೋಕಾಯುಕ್ತ ಬಿ.ವೀರಪ್ಪ ಭೇಟಿ

ಬೆಳಗಾವಿ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರಬೆಳಗಾವಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಭೇಟಿ ನೀಡಿ ಪರಿಶೀಲಿಸಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿನ ತರಕಾರಿ ವ್ಯಾಪಾರಿಗಳ ತೂಕದ ಯಂತ್ರಗಳನ್ನು ಪರಿಶೀಲಿಸಿ ತೂಕದಲ್ಲಿ ಮೋಸ ಮಾಡುತ್ತಿರುವುದು, ದಲ್ಲಾಳಿಗಳು ಹೆಚ್ಚಿನ ಕಮೀಷನ್ ಪಡೆಯುತ್ತಿರುವುದು ಕುರಿತು ಪರಿಶೀಲಿಸಿದರು. ಮಾರುಕಟ್ಟೆಯಲ್ಲಿ ಯಾವೊಬ್ಬ ಸಗಟು ತರಕಾರಿ ವ್ಯಾಪಾರಸ್ಥರು ತರಕಾರಿ ಮಾರಾಟ ಮಾಡಿದರ ರಸೀದಿಗಳನ್ನು ನೀಡದೆ ಇರುವದನ್ನು ಕಂಡು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದರು. ಮಾರುಕಟ್ಟೆಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಮುಚ್ಚಿರುವುದು…

Read More

ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಅವಧಿ ಮೀರಿದ ಆಹಾರ: ಮುಟ್ಟುಗೋಲು ಹಾಕಲು ಉಪ ಲೋಕಾಯುಕ್ತರ ಸೂಚನೆ.

ಬೆಳಗಾವಿ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಕೇಂದ್ರ ಬಸ್ ನಿಲ್ದಾಣದಲ್ಲಿನ ಶೌಚಾಲಯದಲ್ಲಿ ಸ್ವಚ್ಛತೆ ಹಾಗೂ ದರ ಫಲಕಗಳನ್ನು ಹಾಕದೇ ಇರುವುದರ ಕುರಿತು‌ ಗಮನಿಸಿ ಶೌಚಾಲಯ ಬಳಕೆಯ ರಸೀದಿ ನೀಡದೆ ಇರುವುದನ್ನು ಗಮನಿಸಿದರು. ಬಸ್ ನಿಲ್ದಾಣದಲ್ಲಿನ ಉಪಹಾರ ಗೃಹಗಳಿಗೆ ಭೇಟಿ ನೀಡಿ, ಉಪಹಾರ ಗೃಹಗಳಲ್ಲಿ‌ ಸ್ವಚ್ಛತೆ, ಸುರಕ್ಷತೆ ಇಲ್ಲದೆ ಇರುವುದನ್ನು‌ ಗಮನಿಸಿ ಉಪಹಾರ ಗೃಹದಲ್ಲಿ ಆಹಾರ ದರಗಳನ್ನು ಅಳವಡಿಸಲು ಸೂಚಿಸಿದರು. ಆಹಾರ ಸುರಕ್ಷತಾ ಅಧಿಕಾರಿಗಳು…

Read More

ಸುಗೂರ ಎನ್ ಗ್ರಾಮದಲ್ಲಿ ಶ್ರೀ ಭೋಜಲಿಂಗೇಶ್ವರರ ಹಾಗೂ ಅಂಭಾ ಭವಾನಿ ಪಲ್ಲಕ್ಕಿ ಉತ್ಸವಕ್ಕೆ ಹರಿದು ಬಂದ ಭಕ್ತಸಾಗರ

ಸಡಗರ-ಸಂಭ್ರಮದಿಂದ ನಡೆದ ಪಲ್ಲಕ್ಕಿ ಉತ್ಸವ; ಭಕ್ತರ ಭಕ್ತಿಸಂಭ್ರಮಕ್ಕೆ ಸಾಕ್ಷಿಯಾದ ಸುಗೂರ ಎನ್ ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಹೋಬಳಿ ವ್ಯಾಪ್ತಿಯ ಸುಗೂರ ಎನ್ ಗ್ರಾಮದ ಹೊರವಲಯದಲ್ಲಿರುವ ಸುಪ್ರಸಿದ್ಧ ಪವಾಡ ಪುರುಷ, ಸಚ್ಚಿದಾನಂದ ನಿತ್ಯ ನಿರಂಜನ ಸ್ವಯಂಸಿದ್ಧ ಶರಣ ಸದ್ಗುರು ಶ್ರೀ ಭೋಜಲಿಂಗೇಶ್ವರರ ಹಾಗೂ ಅಂಭಾ ಭವಾನಿ ದೇವಿಯ ಪಲ್ಲಕ್ಕಿ ಉತ್ಸವ ಮತ್ತು ಶ್ರೀಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಹಿರಗಪ್ಪ ತಾತನವರ ಭವ್ಯ ಶೋಭಾಯಾತ್ರೆ ಸೋಮವಾರ ಸೀಗೆ ಹುಣ್ಣಿಮೆ ದಿನದಂದು ಅಪಾರ ಭಕ್ತಸಾಗರದ ಮಧ್ಯೆ ಅದ್ದೂರಿಯಾಗಿ ಜರುಗಿತು….

Read More

ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ 215 ಕೋಟಿ ರೂ. ಯೋಜನೆಗೆ ಚಾಲನೆ

ಬೆಳಗಾವಿ, ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರವಾದ ಸವದತ್ತಿ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ 215 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ದೇವಸ್ಥಾನದ ಅಭಿವೃದ್ಧಿ ಹಾಗೂ ನಿರ್ವಹಣೆಯನ್ನು ವ್ಯವಸ್ಥಿತಗೊಳಿಸಲು ವಿಶೇಷ ಪ್ರಾಧಿಕಾರ ರಚಿಸಲಾಗಿದ್ದು, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಕ್ಷೇತ್ರವನ್ನು ಪ್ರಮುಖ ಧಾರ್ಮಿಕ ಪ್ರವಾಸೋದ್ಯಮ ಕೇಂದ್ರವನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಪ್ರವಾಸೋದ್ಯಮ ಇಲಾಖೆ, ಮುಜರಾಯಿ ಇಲಾಖೆ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಶ್ರೀ ರೇಣುಕಾ ಯಲ್ಲಮ್ಮ…

Read More

ಆರೋಗ್ಯ, ಸೌಹಾರ್ದತೆಗೆ ಓಟ; ಸಶಕ್ತ ಕರ್ನಾಟಕ ನಿರ್ಮಾಣದ ಕಡೆ ನೋಟ: ಮೊಹಮ್ಮದ್ ರೋಷನ್

ಬೆಳಗಾವಿ, ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ “ಸಶಕ್ತ ಕರ್ನಾಟಕ” ಕಾರ್ಯಕ್ರಮದಡಿ ಬೆಳಗಾವಿಯೂ ಸೇರಿದಂತೆ ರಾಜ್ಯದ ನಾಲ್ಕು ಪ್ರಮುಖ ಸ್ಥಳಗಳಲ್ಲಿ ರಾಷ್ಟ್ರ ಮಟ್ಟದ ಮ್ಯಾರಥಾನ್ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದ ಭಾಗವಾಗಿ ಭಾನುವಾರ ಸುವರ್ಣ ವಿಧಾನಸೌಧದ ಆವರಣದಲ್ಲಿ ಮ್ಯಾರಾಥಾನ್ ಓಟಕ್ಕೆ ಚಾಲನೆ ನೀಡಲಾಯಿತು. ಮ್ಯಾರಾಥಾನ್ ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಆರೋಗ್ಯ ಮತ್ತು ಸೌಹಾರ್ದತೆ ಮೂಲಕ ಸಶಕ್ತ ಕರ್ನಾಟಕ ರೂಪಿಸುವುದು ನಮ್ಮ ಉದ್ದೇಶವಾಗಿದೆ ಎಂದರು. ಯಾವುದೇ ಜಾತಿ-ಧರ್ಮ, ಕುಲ, ಭೇದ-ಭಾವವಿಲ್ಲದೇ…

Read More

ಚನ್ನಮ್ಮ ಬದುಕು ಇತಿಹಾಸ ಅಲ್ಲ; ನವಪೀಳಿಗೆಗೆ ಸ್ವಾಭಿಮಾನದ ಪಾಠ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಳಗಾವಿ, ಕಿತ್ತೂರು ರಾಣಿ ಚನ್ನಮ್ಮ ಕನ್ನಡ ನಾಡಿನ‌ ದಿಟ್ಟ ಹೋರಾಟಗಾರ್ತಿ. ಚನ್ನಮ್ಮಳ ಧೈರ್ಯ ಇತಿಹಾಸ ಅಲ್ಲ; ಭವಿಷ್ಯದ ನವಪೀಳಿಗೆಗೆ ಸ್ವಾಭಿಮಾನದ ಪಾಠ. ಚನ್ನಮ್ಮಳ ಸಾಹಸ ನಮಗೆಲ್ಲ ಸ್ಫೂರ್ತಿ, ಅವರ ತ್ಯಾಗ ಅಜರಾಮರವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಚನ್ನಮ್ಮನ ಕಿತ್ತೂರಿನ ಕಿತ್ತೂರು ಕೋಟೆಯ ಆವರಣದ ರಾಣಿ ಚನ್ನಮ್ಮ ವೇದಿಕೆಯಲ್ಲಿ ರವಿವಾರ ಜರುಗಿದ ಚನ್ನಮ್ಮನ ಕಿತ್ತೂರ ಉತ್ಸವ-2026ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಿತ್ತೂರು‌ ವಿಜಯೋತ್ಸವ ದೀಪವು ಜನರ ಅಭಿವೃದ್ದಿಗೂ ಬೆಳಕಾಗಬೇಕು. ಈ‌ ನಿಟ್ಟಿನಲ್ಲಿ ಸರಕಾರ ಕ್ರಮ…

Read More

ಚೆನ್ನಮ್ಮನ ಶೌರ್ಯ, ಸ್ವಾಭಿಮಾನ ಸ್ಮರಣೆ; ಮಕ್ಕಳನ್ನು ಚೆನ್ನಮ್ಮನಂತೆ ಬೆಳೆಸಲು ಸಚಿವ ಸತೀಶ್ ಜಾರಕಿಹೊಳಿ ಕರೆ

ಬೆಳಗಾವಿ ರಾಣಿ ಕಿತ್ತೂರು ಚೆನ್ನಮ್ಮನ ಶೌರ್ಯ, ಧೈರ್ಯ ಮತ್ತು ಸ್ವಾಭಿಮಾನದ ಪರಂಪರೆಯನ್ನು ಸ್ಮರಿಸುವ 202ನೇ ಕಿತ್ತೂರು ಉತ್ಸವವನ್ನು ಕಾಕತಿಯಲ್ಲಿ ಸಂಭ್ರಮದಿಂದ ಆಚರಿಸುವುದು ಹೆಮ್ಮೆಯ ಸಂಗತಿ. ದೇಶಕ್ಕೆ ಮಾದರಿಯಾಗುವಂತೆ ತಂದೆ-ತಾಯಿಗಳು ತಮ್ಮ ಮಕ್ಕಳನ್ನು ಕಿತ್ತೂರು ರಾಣಿ ಚೆನ್ನಮ್ಮನ ಆದರ್ಶಗಳಂತೆ ಬೆಳೆಸಬೇಕು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ, ಕಾಕತಿ ಗ್ರಾಮ ಪಂಚಾಯತ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ…

Read More