ಚೆನ್ನೈನಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ಪರ್ಧೆಗೆ ಜ್ಯೋತಿ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳು ಆಯ್ಕೆ
ರಾಜ್ಯಮಟ್ಟದ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ; ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳಿಯ ಜ್ಯೋತಿ ಸೆಂಟ್ರಲ್ ಸ್ಕೂಲ್, ಕ್ಯಾಂಪ್, ಬೆಳಗಾವಿಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಗಾಯನ ಸ್ಪರ್ಧೆಯಲ್ಲಿ ಅದ್ಭುತ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಭಾರತ ವಿಕಾಸ ಪರಿಷತ ವತಿಯಿಂದ ಸಿಂಧನೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಗಾಯನ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಹಿಂದಿ ಗೀತೆ, ಸಂಸ್ಕೃತ ಗೀತೆ ಮತ್ತು ಜಾನಪದ ಗೀತೆ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ವಿದ್ಯಾರ್ಥಿಗಳ ತ್ರಿವಳಿ ತಂಡವು ತಮ್ಮ ಅತ್ಯುತ್ತಮ ಗಾಯನ ಕಲೆಯ…
