ವಿಶ್ವ ಅರಣ್ಯ ರಕ್ಷಕರ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭ.
ಬಳ್ಳಾರಿ ಪ್ರಾದೇಶಿಕ ವಿಭಾಗ ವತಿಯಿಂದ ನಗರದ ಬೆಳಗಲ್ ಕ್ರಾಸ್ನ ಸಸ್ಯ ಕ್ಷೇತ್ರದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ರೇಂಜರ್ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭಕ್ಕೆ ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಕಾರಿ ಡಾ.ಸಂಜಯ್ ಬಿಜ್ಜೂರ್ ಚಾಲನೆ ನೀಡಿ ಅವರು ಮಾತನಾಡಿದರು.ದೇಶವು ಪ್ರಗತಿ ಪಥದಲ್ಲಿ ಸಾಗಬೇಕಾದರೆ ನೈಸರ್ಗಿಕ ಸಂಪನ್ಮೂಲ ಅವಶ್ಯಕವಾಗಿದೆ. ದೇಶ ಹಾಗೂ ಮಾನವ ಸಂಪನ್ಮೂಲವನ್ನು ಪ್ರಾಣ ಪಣಕಿಟ್ಟು ಯಾರು ಉಳಿಸಿಕೊಳ್ಳುತ್ತಾರೋ ಅವರನ್ನು ಅರಣ್ಯ ರಕ್ಷಕ ಎಂದು ಕರೆಯಲಾಗುತ್ತದೆ. ಯಾವ ದೇಶ ನೈಸರ್ಗಿಕ ಸಂಪನ್ಮೂಲಗಳ…
