ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯಗೊಳಿಸಲು ಫೆಬ್ರುವರಿ 28 ಗಡುವು…
ಬೆಳಗಾವಿಯಲ್ಲೂ ಶೇ.60ರಷ್ಟು ನಾಮಫಲಕದಲ್ಲಿ ಕನ್ನಡ ಕಡ್ಡಾಯಗೊಳಿಸದಿದ್ದರೆ ಬೆಂಗಳೂರಿನಲ್ಲಿ ಆದ ಹೋರಾಟ ಬೆಳಗಾವಿಯಲ್ಲಿ ಮರುಕಳಿಸಲಿದೆ. ಬೆಂಗಳೂರಿಗೆ ಆದ ಗತಿ ಬೆಳಗಾವಿಗೂ ಆಗಲಿದೆ. ಫೆಬ್ರುವರಿ.28ರ ಬಳಿಕ 31 ಜಿಲ್ಲೆಗಳಲ್ಲೂ ಹೋರಾಟ ನಡೆಯಲಿದ್ದು, ಮತ್ತೆ ಜೈಲಿಗೆ ಹೋದರೂ ಹೆದರುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಗುಡುಗಿದರು.ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲ ಕನ್ನಡಿಗರು ಒಟ್ಟಾರೆ ಬೆಂಬಲಿಸಿದ್ದು ಕನ್ನಡ ನಾಮಫಲಕ ಕಡ್ಡಾಯ ಹೋರಾಟವನ್ನು. ಅದು ಕೇವಲ ಬೆಂಗಳೂರಿಗೆ ಅಷ್ಟೇ ಅಲ್ಲದೇ ರಾಜ್ಯದಾಧ್ಯಂತ ಶೇ.60ರಷ್ಟು ಕನ್ನಡ ಬಳಕೆ ಮಾಡುವಂತೆ ಒತ್ತಡ…
