BREAKING NEWS

ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು : ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌

ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಹೇಳಿದ್ದಾರೆ. ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 2,000, ಆರ್ಥಿಕ ಸಹಾಯ ಯೋಜನೆಯಡಿ 30,000ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ. ಅಂತೆಯೇ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುವುದು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ…

Read More

3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಲಕ್ಷ್ಮೀ ಹೆಬ್ಬಾಳ್ಳರ್

ಬೆಳಗಾವಿ, ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಲಕ್ಷ್ಮಿ ಹೆಬ್ಬಾಳ್ಳರ್‌ ತಿಳಿಸಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಸದಸ್ಯ ಜವರಾಯಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯವಿದೆ. ಏಕೆಂದರೆ ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆ ಯಡಿ ಹಂಚಿಕೆ…

Read More

ಬೆಳಗಾವಿ ಪತ್ರಿಕಾ‌ ಭವನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು.

ಬೆಳಗಾವಿ ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ ಪತ್ರಿಕಾ ಭವನ‌ ಹಾಗೂ ತೋಟಗಾರಿಕೆ ಇಲಾಖೆ‌ ಕಚೇರಿ ಕಟ್ಟಡಗಳ ಭೂಮಿ ಪೂಜೆಯನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ನೆರವೇರಿಸಿ ಅವರು ಮಾತನಾಡಿದರು. ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನವನ್ನು ಒದಗಿಸುವ ಮೂಲಕ ಅನೇಕ ದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಅದೇ ರೀತಿ ಅಗತ್ಯ ಅನುದಾನ ಒದಗಿಸುವ ಮೂಲಕ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು. ತೋಟಗಾರಿಕೆ ಇಲಾಖೆಯ ಕಟ್ಟಡ‌ ನಿರ್ಮಾಣ‌ ಮಾಡುವದರ ಮೂಲಕ‌ ಸಾರ್ವಜನಿಕರಿಗೆ…

Read More

ಕೌಜಲಗಿ ತಾಲ್ಲೂಕು ರಚನೆಗಾಗಿ ಧರಣಿ: ಬೆಳಗಾವಿ ಅಧಿವೇಶನದಲ್ಲಿಯೇ ಕೌಜಲಗಿ ತಾಲ್ಲೂಕು ಘೋಷಣೆಗೆ ಆಗ್ರಹ

ಕೌಜಲಗಿ: ರಾಜ್ಯದ ಅತೀ ದೊಡ್ಡ ಜಿಲ್ಲೆಯಾದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲೆಯನ್ನಾಗಿಸಿ , ಗೋಕಾಕ ತಾಲ್ಲೂಕಿನ ಹೋಬಳಿ ಕೇಂದ್ರವಾದ ಕೌಜಲಗಿ ಪಟ್ಟಣವನ್ನು ನೂತನ ತಾಲ್ಲೂಕು ಕೇಂದ್ರವನ್ನಾಗಿ ಇದೇ ಬೆಳಗಾವಿ ಅಧಿವೇಶನದಲ್ಲಿಯೇ ಘೋಷಿಸಬೇಕೆಂದು ಕೌಜಲಗಿ ತಾಲ್ಲೂಕು ಹೋರಾಟಗಾರರ ವೇದಿಕೆ ಸರ್ಕಾರಕ್ಕೆ ಆಗ್ರಹಪಡಿಸಿದೆ.ಪಟ್ಟಣದ ಕಳ್ಳಿಗುದ್ದಿ ಸರ್ಕಲ್ ನಲ್ಲಿ ಗುರುವಾರ ಕೌಜಲಗಿ ತಾಲ್ಲೂಕು ಹೋರಾಟಗಾರರು ಕೌಜಲಗಿ ತಾಲ್ಲೂಕು ರಚನೆಗಾಗಿ ಒಂದು ದಿನದ ಸಾಂಕೇತಿಕ ಧರಣಿ ನಡೆಸಿ,ಕೌಜಲಗಿ ಉಪ ತಹಶೀಲ್ದಾರರ ಪರವಾಗಿ ಉಪತಹಸೀಲ್ದಾರ ಡಿ.ಸಿ. ಪತ್ತಾರ ಅವರಿಗೆ ಮನವಿ ಸಲ್ಲಿಸಿದರು. ಉಪತಹಶೀಲ್ದಾರರ…

Read More

ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜಗೆ ಆಕ್ರೋಶ ವ್ಯಕ್ತಪಡಿಸಿ, ಕೆ.ಚಂದರಗಿ ಹತ್ತಿರ ಹೆದ್ಧಾರಿ ತಡೆ ಪ್ರತಿಭಟನೆ ನಡೆಸಿದರು.

ರಾಮದುರ್ಗ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದ 2ಎ ಮೀಸಲಾತಿ ನೀಡಬೇಕೆಂದು ಬೆಳಗಾವಿ ಸುವರ್ಣಸೌಧ ಬಳಿ ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ ಮಾಡಿಸಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮುದಾಯದ ಜನತೆ ಗುರುವಾರ ರಾಮದುರ್ಗ ತಾಲೂಕಿನ ಕೆ.ಚಂದರಗಿಯ ರಾಜ್ಯ ಹೆದ್ಧಾರಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಬೆಳಗಾವಿ-ಬಾಗಲಕೋಟ ರಾಜ್ಯ ಹೆದ್ಧಾರಿ ಕೆ.ಚಂದರಗಿಯ ಚೆನ್ನಮ್ಮ ಸರ್ಕಲ್‌ನಲ್ಲಿ ಕೆಲಕಾಲ ರಸ್ತೆತಡೆ ನಡೆಸಿ, ಪಂಚಮಸಾಲಿ ಸಮುದಾಯ ವಿರೋಧಿ ನೀತಿ ಅನುಸರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…

Read More

ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು

ಕಾರವಾರ: ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ. ಇಂದು (ಡಿಸೆಂಬರ್ 10) ಸಂಜೆ ಕಡಲ ತೀರದಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ಕು ಬಾಲಕರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿಗಳಿಗೆ ಶೋಧ ಕಾರ್ಯ ನಡೆದಿದೆ. ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6…

Read More

ಭರೂಚ್ ನಗರದ ಬಳಿಯ ಹೆದ್ದಾರಿಯಲ್ಲಿ ರಸ್ತೆಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಯಾತ್ರಿಗಳ ಮೇಲೆ ಹರಿದ ಲಾರಿ

ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ನೀಡಲು ಮಂಗಳೂರಿನಿಂದ ದೆಹಲಿಗೆ ಐದು ಜನರ ತಂಡ ಪಾದಯಾತ್ರೆ ಹೊರಟಿತ್ತು. ಇಂದು 55ನೆಯ ದಿನ ಪಾದಯಾತ್ರೆಯು ಗುಜರಾತಿನ ಭರೂಚ್ ಎನ್ನುವ ನಗರ ತಲುಪಿತ್ತು. ಈ ಪಾದಯಾತ್ರೆಯಲ್ಲಿದ್ದವರಿಗೆ ನೈತಿಕ ಬೆಂಬಲ ನೀಡಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರೂ ಸಹ ನೆನ್ನೆ ಮತ್ತು ಇಂದು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ…

Read More

ಎಸ್ಎಂ ಕೃಷ್ಣ ನಿಧನ, ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಇನ್ನಿಲ್ಲ

ಬೆಂಗಳೂರು: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ…

Read More

ಗಾಂಧಿಭಾರತ ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅನಾವರಣಗೊಳಿಸಿದರು

ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ ” ಗಾಂಧಿಭಾರತ” ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿಅನಾವರಣಗೊಳಿಸಿದರು.ಡಿಸೆಂಬರ್ 26 ಹಾಗೂ 27 ರಂದು ಗಾಂಧಿಭಾರತ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.ಮುಂಬರುವ 2025 ರ ಅಕ್ಟೋಬರ್ 2 ರವರೆಗೆ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. 1924 ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ…

Read More

ಬೆಳಗಾವಿ ಜಿಲ್ಲಾ ನ್ಯಾಯಾಲಯದ ನೇತೃತ್ವದಲ್ಲಿ ರಾಮದುರ್ಗದ ಲೋಕೋಪಯೋಗಿ ಇಲಾಖೆ ಕಾರ್ಯಾಲಯದ ಪಿಠೋಪಕರಣಗಳನ್ನು ಜಿಲ್ಲಾ ನ್ಯಾಯಾಲಯದ ಆದೇಶದಂತೆ ಜಪ್ತ ಮಾಡಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪಿಠೋಪಕರಣಗಳನ್ನು ಜಿಲ್ಲಾ ನ್ಯಾಯಾಲಯದ ಆದೇಶದಂತೆ ಜಪ್ತ ಮಾಡಲಾಯಿತು.ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಸ್ವಾಧೀನಪಡಿಸಿಕೊಂಡ ಲೋಕೋಪಯೋಗಿ ಇಲಾಖೆ ಹೈಕೋರ್ಟ ಆದೇಶದಂತೆ ಭೂ ಮಾಲಿಕರಿಗೆ ಪರಿಹಾರ ನೀಡದಿರುವ ಕಾರಣದಿಂದಾಗಿ ಬೆಳಗಾವಿ ಜಿಲ್ಲಾ ನ್ಯಾಯಾಲಯದ ನೇತೃತ್ವದಲ್ಲಿ ರಾಮದುರ್ಗದ ಲೋಕೋಪಯೋಗಿ ಇಲಾಖೆ ಕಾರ್ಯಾಲಯದ ಪಿಠೋಪಕರಣಗಳನ್ನು ಜಪ್ತ ಮಾಡಿದರು ರಾಮದುರ್ಗ ಪಟ್ಟಣದ ನ್ಯಾಯವಾದಿ ಶಿವಾನಂದ ಸಾಗಶೆಟ್ಟಿ ಅವರ ಮಾಲಿಕತ್ವದ ಜಮೀನನ್ನು ಲೋಕೋಪಯೋಗಿ ಇಲಾಖೆ ನ್ಯಾಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಸ್ವಾಧೀನ ಪಡಿಸಿಕೊಂಡಿತ್ತು. ಸರಕಾರ ನೀಡುತ್ತಿರುವ ಪರಿಹಾರ…

Read More