BREAKING NEWS

ಕುಟಕನಕೇರಿ ಗ್ರಾಮದಲ್ಲಿ ಹೈಟೆಕ್ ಮೆಕ್ಕೆಜೋಳದ ಕ್ಷೇತ್ರೋತ್ಸವ ಕಾರ್ಯಕ್ರಮ

ರೈತರಿಗೆ ವರದಾನವಾಗಿರುವ ಹಾಗೂ ರೈತರ ಪರವಾಗಿರುವ ಹೈಟೆಕ್ ಮೆಕ್ಕೆಜೋಳ 5109 ಹಾಕಿ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯುವ ಮೆಕ್ಕೆಜೋಳವಾಗಿದೆ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಂಪನಿಯ ಪ್ರತಿನಿಧಿಯಾದK T ರವಿಕುಮಾರ್,ZSM TSM ಪ್ರಶಾಂತ್ ವಾಲಿ ಹೇಳಿದರು ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಕುಟಕನಕೇರಿ ಗ್ರಾಮದ ರೈತ ಈರಣ್ಣ ಕಿಡಿಯಪ್ಪನವರ ಇವರ ಜಮೀನಿನಲ್ಲಿ ಹೈಟೆಕ್ ಮೆಕ್ಕೆಜೋಳದ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಾ 5109 ಹೈಟೆಕ್ ನೀರಾವರಿ ತಳಿಯಾಗಿದ್ದು ಉತ್ತಮ ಇಳುವರಿ ನೀಡುವ ತಳಿಯಾಗಿದ್ದು ಮತ್ತು ಮಧ್ಯಮ ಎತ್ತರ ದಟ್ಟ…

Read More

ಶಿಕ್ಷಣ ಇಲಾಖೆ ಖದೀಮರ ಸಾರಥ್ಯದಲ್ಲಿ ರಾಮದುರ್ಗದಲ್ಲಿ ಅನಧಿಕೃತ ಕೋಚಿಂಗ್ ಸೆಂಟರಗಳ ಹಾವಳಿ!

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಅನಧಿಕೃತ ಕೋಚಿಂಗ್ ಸೆಂಟರಗಳ ಹಾವಳಿ ಹೆಚ್ಚಾಗಿದೆ. ರಾಮದುರ್ಗ ತಾಲೂಕಿನಲ್ಲಿ ನಡೆಯುತ್ತಿರುವ ಅನಧಿಕೃತ ಕೋಚಿಂಗ್ ಸೆಂಟರಗಳ ಮೇಲೆ ಕ್ರಮ ಜರುಗಿಸಬೇಕೆಂದು ದಿನಾಂಕ.27/06/2024 ರಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಬೆಳಗಾವಿ, ಆಯುಕ್ತರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಧಾರವಾಡ, ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ನೃಪತುಂಗ ರಸ್ತೆ ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಿದರು ಕೂಡ ಇದುವರೆಗೆ ನಿಲ್ಲಲಾರದ ಅನಧಿಕೃತ ಕೋಚಿಂಗ್ ಸೆಂಟರಗಳು.ಅರ್ಜಿ ಸಲ್ಲಿಸಿ 4 ತಿಂಗಳು ಕಳೆದರೂ ಕೂಡ ಇದುವರೆಗೆ ನನ್ನ…

Read More

ಮಾಂಜರಿ-ಬವನ ಸವದತ್ತಿ ಸೇತುವೆ ಮೂರು ತಿಂಗಳಿಗೇ ಕೊಚ್ಚಿಹೋದ 6.5 ಕೋಟಿ ರೂ ವೆಚ್ಚದ ಸೇತುವೆ!

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಗ್ರಾಮದ ಬಳಿ ಕೃಷ್ಣಾ ನದಿಗೆ 6.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಇತ್ತೀಚೆಗೆ ನಿರ್ಮಿಸಲಾದ ಮಾಂಜರಿ-ಬವನ ಸವದತ್ತಿ ಸೇತುವೆ-ಕಮ್-ಬ್ಯಾರೇಜ್ ನಿರ್ಮಾಣಕ್ಕೆ ಅಡ್ಡಲಾಗಿ 3 ತಿಂಗಳ ನಂತರ ಕೊಚ್ಚಿ ಹೋಗಿರುವುದು ಸ್ಥಳೀಯರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಳಪೆ ಗುಣಮಟ್ಟದ ಕಾಮಗಾರಿ ಯಿಂದಾಗಿ ಪ್ರಬಲವಾದ ನದಿ ಪ್ರವಾಹ ತಡೆಯದ ಸೇತುವೆಗ ಕುಸಿದಿದೆ ಎಂದು ಆರೋಪಿಸಿದ್ದಾರೆ. ರಾಯಬಾಗ, ಚಿಂಚಲಿ, ಕುಡಚಿ, ದಿಗ್ಗೇವಾಡಿ ಮುಂತಾದ ಹಲವಾರು ಗಡಿ ಗ್ರಾಮಗಳಿಗೆ ಸಂಪರ್ಕ ಸುಧಾರಿಸುವ ಉದ್ದೇಶದಿಂದ…

Read More

ಭಕ್ತ ಶ್ರೇಷ್ಠ ಕನಕದಾಸ‌ ಜಯಂತಿಆಕರ್ಷಕ‌ ಮೆರವಣಿಗೆಗೆ ಶಾಸಕ ಆಸೀಫ ಸೇಠ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಭಕ್ತ ಶ್ರೇಷ್ಠ ಕನಕದಾಸ‌ ಜಯಂತಿಯನ್ನು ಮಹಾನಗರ ಪಾಲಿಕ ಉಪ ಆಯುಕ್ತರಾದ ಉದಯಕುಮಾರ ಅವರು‌ ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕದಾಸರ ಕೊಡುಗೆ ಅಪಾರವಾದುದು. ಕನಕದಾಸರ ಜಯಂತಿಯನ್ನು ಭಕ್ತಿಪೂರ್ವಕವಾಗಿ, ಅಭಿಮಾನಪೂರ್ವಕವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸಾಂಸ್ಕೃತಿಕ ಲೋಕಕ್ಕೆ ಅವರ ಕೊಡುಗೆಯು ದೊಡ್ಡ ಪ್ರಮಾಣದಲ್ಲಿ ಆಧ್ಯಾತ್ಮಿಕ…

Read More

ರಾಮದುರ್ಗ ವಿಧಾನಸಭಾ ಮತಕ್ಷೇತ್ರMLC ಅನುದಾನದ ಅಡಿ 49 ಲಕ್ಷ ರೂ. ಯೋಜನೆ ಕಾಮಗಾರಿಗಳಿಗೆ ಬೆಳಗಾವಿ ವಿಧಾನ ಪರಿಷತ್ ಸದಸ್ಯರು ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜಾ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿಧಾನಸಭಾ ಮತಕ್ಷೇತ್ರ MLC ಅನುದಾನದ ಅಡಿ 49 ಲಕ್ಷ ರೂ. ಯೋಜನೆಯ ವಿವಿಧ ಕಾಮಗಾರಿಗಳಿಗೆ ಬೆಳಗಾವಿ ವಿಧಾನ ಪರಿಷತ್ ಸದಸ್ಯರು ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜಾ ನೆರವೇರಿಸಿ ಮಾತನಾಡಿದರು. ರಾಮದುರ್ಗ ಪಟ್ಟಣದ ಗಾಂಧಿ ನಗರದ ಬಸವೇಶ್ವರ ದೇವಸ್ಥಾನ ಸಮುದಾಯ ಭವನ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ,ಅಂಜುಮನ್ ಪ್ರೌಢಶಾಲೆಯ ಮೊದಲನೇ ಮಹಡಿಯ ಕಾಮಗಾರಿಗೆ 10 ಲಕ್ಷ ರೂಪಾಯಿ,ರಾಮದುರ್ಗ ತಾಲ್ಲೂಕಿನ ಸುನ್ನಾಳ ಪುನರ್ವಸತಿ ಕೇಂದ್ರದಲ್ಲಿ ಸೋಮಪ್ಪ ಸಿನ್ನಾಳ ಇವರ ಮನೆಯಿಂದ ಗುರನಗೌಡ ಪಾಟೀಲ ಇವರ…

Read More

ಕಬ್ಬು ಸಾಗಿಸುವ ವಾಹನಗಳಲ್ಲಿ‌ ಸುರಕ್ಷತಾ ಮುನ್ನೆಚ್ಚರಿಕೆಯಾಗಿ ಪ್ರತಿಫಲಿತ ಬ್ಯಾನರ್‌ಗಳನ್ನು ಹಾಕಲು ಅರಿವು ಮೂಡಿಸುವ ಕಾರ್ಯಕ್ರಮ

ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ‌ ಕಬ್ಬು ಸಾಗಿಸುವ ಟ್ರಾಕ್ಟರ್‌ಗಳಿಂದ ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಟ್ರ್ಯಾಕ್ಟರ್ ಚಾಲಕರಿಗೆ ಸಂಚಾರ ನಿಯಮಗಳ ಪಾಲನೆಯ ಬಗ್ಗೆ ಮತ್ತು ಕಬ್ಬು ಸಾಗಿಸುವ ವಾಹನಗಳಲ್ಲಿ‌ ಸುರಕ್ಷತಾ ಮುನ್ನೆಚ್ಚರಿಕೆಯಾಗಿ ಪ್ರತಿಫಲಿತ ಬ್ಯಾನರ್‌ಗಳನ್ನು ಹಾಕಲು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Read More

ಖಾನಪೇಟೆದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಕಾರ್ಯಾಲಯವನ್ನು ಶ್ರೀಗಳು ಹಾಗೂ ಗಣ್ಯರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟೆದಲ್ಲಿ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಪಾಲ್ಗೊಂಡು ಅವರು ಮಾತನಾಡಿದರು.ರಾಜ್ಯದಲ್ಲಿಯೇ ನಮ್ಮ ಕಾರ್ಖಾನೆಯನ್ನು ಮಾದರಿ ಕಾರ್ಖಾನೆಯನ್ನಾಗಿ ಮಾಡಬೇಕೆಂಬ ಸದಿಚ್ಚೆಯೊಂದಿಗೆ ಶ್ರಮಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಕಾರ್ಖಾನೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವದು ಎಂದರು.ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಮಾತನಾಡಿ, ರೈತರ ಹಾಗೂ ಕಾರ್ಖಾನೆಯ ಶೇರುದಾರರ ಹಿತಕಾಯಲು ನಾವು ಬದ್ಧರಾಗಿದ್ದೇವೆ. ರೈತರ ಯೋಗಕ್ಷೇಮ ಮತ್ತು ಅವರ ಕಷ್ಟಗಳನ್ನು ಆಲಿಸಲು…

Read More

ಬೆಟಗೇರಿ ಪ್ರೌಢ ಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳಿಗೆ ಭೂಮಿಪೂಜೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನ.೧೨ರಂದು ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು.ಬೆಳಗಾವಿ ಜಿಲ್ಲಾ ಪಂಚಾಯತ, ಚಿಕ್ಕೋಡಿ ಪಂಚಾಯತ ರಾಜ್ ಇಂಜನೀಯರಿಂಗ್ ವಿಭಾಗ ಹಾಗೂ ಗೋಕಾಕ ಸಹಾಯಕ ಕಾರ್ಯಕಾರಿ ಅಭಿಯಂತರರು ಪಂಚಾಯತ ರಾಜ್ ಇಂಜನೀಯರಿಂಗ್ ಉಪವಿಭಾಗದ ಸಹಯೋಗದಲ್ಲಿ ಸನ್೨೦೨೨-೨೩ನೇ ಸಾಲಿನ ಕೇಂದ್ರ ಯೋಜನಾ ಅನುಮೋದನಾ ಮಂಡಳಿ(ಪಿಎಬಿ)ವಾರ್ಷಿಕ ಕ್ರೀಯಾ ಯೋಜನೆಯಡಿಯ ಸುಮಾರು ೬೭ ಲಕ್ಷ ರೂ.ಗಳ ಅನುದಾನದಡಿಯಲ್ಲಿ ನೂತನ ೪ ಶಾಲಾ ಕೊಠಡಿ ನಿರ್ಮಾಣ ಮಾಡಲಾಗುವುದು…

Read More

ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭ

ಬೆಟಗೇರಿ:ಆನಂದಕಂದ ಕಾವ್ಯನಾಮದಿಂದ ಚಿರಪರಿತರಾಗಿರುವ ಡಾ.ಬೆಟಗೇರಿ ಕೃಷ್ಣಶರ್ಮರು ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು. ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.೯ರಂದು ನಡೆದ…

Read More

ಕಾಂಗ್ರೆಸ್ ಮಾತ್ರ ಶೋಷಿತರ ರಕ್ಷಣೆ ಮಾಡುತ್ತದೆ : ಜ್ಯೋತಿ ಗೊಂಡಬಾಳ

ಕೊಪ್ಪಳ: ಐದು ಪ್ರಮುಖ ಸಮಾಜಮುಖಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ, ಯುವನಿಧಿ, ಅನ್ನಭಾಗ್ಯ ಮತ್ತು ಗೃಹಜ್ಯೋತಿ ಎಂಬ ಗ್ಯಾರಂಟಿಗಳ ಮೂಲಕ ಹಿಂದುಳಿದ, ಬಡವರ ಕಲ್ಯಾಣ ಮತ್ತು ಬದುಕಿಗೆ ಶಕ್ತಿ ನೀಡಿದ ಸಿದ್ದರಾಮಯ್ಯ ಸರಕಾರಕ್ಕೆ ಮತ್ತಷ್ಟು ಶಕ್ತಿ ನೀಡಲು ಅನ್ನಪೂರ್ಣ ತುಕಾರಾಂ ಅವರನ್ನು ಗೆಲ್ಲಿಸಬೇಕು ಎಂದು ಗ್ಯಾರಂಟಿ ಸಮಿತಿ ಸದಸ್ಯೆ, ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಮನವಿ ಮಾಡಿದರು.ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಅಂತಾಪುರದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ನಾಡು ಕಂಡ ಶ್ರೇಷ್ಠ ಮುಖ್ಯಮಂತ್ರಿಯಲ್ಲಿ ಸಿದ್ದರಾಮಯ್ಯ ಅವರು…

Read More