ಮೇ 07 ರಂದು ಜರುಗಲಿರುವ ಚುನಾವಣೆಯಲ್ಲಿ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವ ಮೂಲಕ ಸಧೃಡ ರಾಷ್ಟ್ರ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ ಅವರು ಕರೆ ನೀಡಿದರು.
ಚಿಕ್ಕೋಡಿ ಪಟ್ಟಣದ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಮತದಾನ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ಕುಂಬ ಮೇಳ ಜಾಥಾ ಕಾರ್ಯಕ್ರಮಕ್ಕೆ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ ಚಾಲನೆ ನೀಡಿ ಅವರು ಮಾತನಾಡಿದರು ಎಲ್ಲ ಮತದಾರರು ತಪ್ಪದೇ ಮತ ಚಲಾಯಿಸುವುದರಿಂದ ಪ್ರಜಾಪ್ರಭುತ್ವ ಗಟ್ಟಿಗೊಳ್ಳುತ್ತದೆ. ಮತದಾನದಿಂದ ಯಾರು ಕೂಡಾ ಹೊರಗುಳಿಯದೇ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು. ಒಬ್ಬ ಮಹಿಳೆ ಕನಿಷ್ಠ ಹತ್ತು ಜನರಿಗಾದ್ರೂ ಮತದಾನ ಮಾಡುವಂತೆ ಪ್ರೇರೆಪಸಿಬೇಕು ಎಂದು ಕುಂಬ ಮೇಳದಲ್ಲಿ ಪಾಲ್ಗೊಂಡ ಮಹಿಳೆಯರಿಗೆ ತಿಳಿಸಿದರು. ಕಡ್ಡಾಯವಾಗಿ ಮತದಾನ…
