BREAKING NEWS

ಮೇ ಸಾಹಿತ್ಯ ಮೇಳದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಮನವಿ

ಕೊಪ್ಪಳ: ಇಲ್ಲಿನ ಮೇ ಸಾಹಿತ್ಯ ಬಳಗ, ಲಡಾಯಿ ಪ್ರಕಾಶನ ಗದಗ, ಕವಿ ಪ್ರಕಾಶನ ಕವಲಕ್ಕಿ, ಚಿತ್ತಾರ ಕಲಾ ಬಳಗ ಧಾರವಾಡ ಇವರ ಸಹಯೋಗದಲ್ಲಿ ಮೇ ೨೫ ಹಾಗು ೨೬ ರಂದು ನಡೆದ ೧೦ ನೇ ಮೇ ಸಾಹಿತ್ಯ ಮೇಳದಲ್ಲಿ ನಿರ್ಣಯಿಸಿದ ಬೇಡಿಕೆಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವಂತೆ ಮನವಿ ಸಲ್ಲಿಸಿದರು.ಮೇಳದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅವಶ್ಯವಾಗಿರುವ ನಿರ್ಣಯಗಳನ್ನು ಮಂಡಿಸಿದ್ದು, ಈ ನಿರ್ಣಯಗಳ ಶೀಘ್ರ ಅನುಷ್ಠಾನಗೊಳ್ಳುವುದು ಅವಶ್ಯವಾಗಿದ್ದು ಸರಕಾರ ಅವುಗಳ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಪ್ರಗತಿಪರ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಬರೆದ…

Read More

ಡಿಸಿಪಿ ಡಿ.ದೇವರಾಜ್ ಅಭಿಮಾನಿ ಬಳಗದ ವತಿಯಿಂದ ಗಿಡ ನೆಡುವ ಮೂಲಕ ಹುಟ್ಟು ಹಬ್ಬ ಆಚರಣೆ

ಕೋಲಾರ: ದಕ್ಷ ಪೊಲೀಸ್ ಐಪಿಎಸ್ ಅಧಿಕಾರಿ ಡಿಸಿಪಿ ಡಿ.ದೇವರಾಜ್‌ರವರ ಹುಟ್ಟುಹಬ್ಬವನ್ನು ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಧರ್ಮರಾಯನಗರದ ಉದ್ಯಾನವನದಲ್ಲಿ ಡಿ.ದೇವರಾಜ್‌ಅಭಿಮಾನಿಗಳು, ಕನ್ನಡ ಸೇನೆ ಜಿಲ್ಲಾ ಘಟಕ ಹಾಗೂ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಮಾತನಾಡಿ, ನಮ್ಮ ಕೋಲಾರದ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾದ ಡಿಸಿಪಿ ಡಿ.ದೇವರಾಜ್ ರವರು ಕೋಲಾರದಲ್ಲಿ ಎಸ್ಪಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಅವರು…

Read More

ಖಾಸಗಿ ಬಸ್ ಪಲ್ಟಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಧಾರಾಕಾರವಾಗಿ ಸುರಿದ ಮಳೆಯ ಕಾರಣದಿಂದ ತಿರುವಿನಲ್ಲಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕ ರನ್ನು ಸಾಗರ, ಆನಂದಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Read More

ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಅಭಿನಂದಿಸಿದರು.

ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಅಭಿನಂದಿಸಿದರು. ಈ ವೇಳೆ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಶಾಸಕರಾದ ಅಶೋಕ್ ಪಟ್ಟಣ, ಬಾಬಾಸಾಬ್ ಪಾಟೀಲ್, ವಿಶ್ವಾಸ ವೈದ್ಯ, ಆಸೀಫ್ ಸೇಠ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ವಿನಯ್ ನಾವಲಗಟ್ಟಿ, ಶಾಮ್ ಘಾಟಗೆ, ವೀರಕುಮಾರ ಪಾಟೀಲ್, ಮಹಾವೀರ ಮೋಹಿತೆ, ಗಜಾನನ ಮಂಗಸೂಳಿ ಮತ್ತಿತರರು…

Read More

ಘಟಪ್ರಭಾ ನದಿ ದಾಟುವ ವೇಳೆ ಜನರನ್ನು ಹೊತ್ತು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ ಪಲ್ಟಿ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನದಿ ದಾಟುವ ವೇಳೆ 13 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಮಗುಚಿಬಿದ್ದ ಘಟನೆ ನಡೆದಿದೆ. ಘಟಪ್ರಭಾ ನದಿ ದಾಟುವ ವೇಳೆ ಆಯತಪ್ಪಿ ನದಿಗೆ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಟ್ರ್ಯಾಕ್ಟರ್ನಲ್ಲಿ 13 ಜನರಿದ್ದರು. ಅದರಲ್ಲಿ 12 ಜನರು ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಓರ್ವ ಕಣ್ಮರೆಯಾಗಿದ್ದಾರೆ.13 ಜನರು ಅವರಾದಿಯಿಂದ ನಂದಗಾಂವ್ ಗೆ ಟ್ರ್ಯಾಕ್ಟರ್ ಮೇಲೆ ಕುಳಿತುಕೊಂಡು ಕೂಲಿ ಕೆಲಸಕ್ಕೆಂದು‌ ತೆರಳುತ್ತಿದ್ದರು. ಘಟಪ್ರಭಾ ನದಿ ದಾಟಿಕೊಂಡು ಕೂಲಿ ಕೆಲಸಕ್ಕೆ ಹೋಗಬೇಕಿತ್ತು. ಆದರೆ ಈ…

Read More

ಡಿಮ್ಹಾನ್ಸ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ ಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಡಿಮ್ಹಾನ್ಸ್ ಸಂಸ್ಥೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ.ಅರುಣಕುಮಾರ ಸಿ. ರವರು ಸಸಿ ನೆಟ್ಟು ಅದಕ್ಕೆ ನೀರುಣಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಡಿಮ್ಹಾನ್ಸ್ ನ ವೈದ್ಯಕೀಯ ಅಧೀಕ್ಷಕರಾದ ಡಾ.ರಾಘವೇಂದ್ರ ನಾಯಕ್, ಶುಶ್ರೂಷಕ ಅಧಿಕ್ಷಕರಾದ ಗಾಯತ್ರಿ ಶಿಂಧೆ, ಮನೋವೈದ್ಯರು ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಮಂಜುನಾಥ ಭಜಂತ್ರಿ, ಮನೋವೈದ್ಯಕೀಯ ಸಮಾಜಕಾರ್ಯ ವಿಭಾಗದ ಸಿಬ್ಬಂದಿಗಳಾದ ಅಶೋಕ ಕೋರಿ, ಆರ್.ಎಮ್.ತಿಮ್ಮಾಪೂರ, ಅನಂತರಾಮು ಬಿ.ಜಿ,…

Read More

ತುಪ್ಪರಿ ಹಳ್ಳ, ಬೆಣ್ಣಿಹಳದ ಪ್ರವಾಹದ ಬಗ್ಗೆ ನಿರಂತರ ನಿಗಾ, ಮುನ್ನೆಚ್ಚರಿಕೆ ವಹಿಸಿ; ಬೀಜ, ಗೊಬ್ಬರದ ಕೃತಕ ಅಭಾವ ಸೃಷ್ಟಿ ಆಗದಂತೆ ಅಧಿಕಾರಿಗಳು, ಕ್ರಮವಹಿಸಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಪೂರ್ಣ ಆವರಿಸಿದ್ದು, ಮಳೆ ತೀವ್ರಗೊಳ್ಳುತ್ತಿದೆ. ಜಿಲ್ಲೆಯ ಎರಡು ಮುಖ್ಯ ಹಳ್ಳಗಳಾದ ತುಪ್ಪರಿ ಹಳ್ಳ ಮತ್ತು ಬೆಣ್ಣಿ ಹಳ್ಳದ ಪ್ರವಾಹದ ಬಗ್ಗೆ ನಿರಂತರ ನಿಗಾ ವಹಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಎರಡು ಹಳ್ಳಗಳಿಗೆ ಸಂಬಂಧಿಸಿದ ಪಿಡಿಓಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಸ್ಥಾನಿಕವಾಗಿ ಕೇಂದ್ರ ಸ್ಥಾನದಲ್ಲಿದ್ದು, ತಾಲೂಕು ಆಡಳಿತಕ್ಕೆ ಮತ್ತು ಜಿಲ್ಲಾಡಳಿತಕ್ಕೆ ನೀರಿನ ಮಟ್ಟದ ಏರಿಕೆ ಹಾಗೂ ಪ್ರವಾಹದ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು…

Read More

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಕ್ಕೆ ವಿಶೇಷ ಸಂಪನ್ಮೂಲ ಶಿಕ್ಷಕರ ನೇರಗುತ್ತಿಗೆ ನೇಮಕಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 16 ಹುದ್ದೆಗಳಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಡಿಇಡಿ, ಬಿಇಡಿ ಪ್ರಮಾಣ ಪತ್ರ, ಆರ್‍ಸಿಐ ಪ್ರಮಾಣ ಪತ್ರ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಜೂನ್ 12, 2024 ರಂದು ಸಂಜೆ 5.00 ಗಂಟೆಯೊಳಗಾಗಿ ಸಲ್ಲಿಸಬೇಕು ಈ ಹುದ್ದೆಗಳಲ್ಲಿ ನೇರಗುತ್ತಿಗೆಯ…

Read More

ಕರ್ನಾಟಕ ಲೋಕಾಯುಕ್ತ, ಧಾರವಾಡ ಜೂನ್ 12ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

ಧಾರವಾಡ ಕರ್ನಾಟಕ ಲೋಕಾಯುಕ್ತ, ಧಾರವಾಡ ಕಚೇರಿಯ ಪೊಲೀಸ್ ಅಧಿಕಾರಿಗಳು ಜೂನ್ 12, 2024 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು ಜೂನ್ 12 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹುಬ್ಬಳ್ಳಿಯ ತಾಲೂಕು ಪಂಚಾಯತ ಸಭಾಭವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ದೂರ, ಅಹವಾಲುಗಳನ್ನು ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

Read More

ಮುಳ್ಳೂರ್ ಗ್ರಾಮದ ರೈತರಿಗೆ ಸೂರ್ಯಕಾಂತಿ ಬೀಜಗಳನ್ನು ಉಚಿತವಾಗಿ ವಿತರಿಸಲಾಯಿತು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದ ಕೃಷಿ ವಿಜ್ಞಾನ ಕೇಂದ್ರದಿಂದ ಗ್ರಾಮದ ರೈತರಿಗೆ ಸೂರ್ಯಕಾಂತಿ ಬೀಜಗಳನ್ನು ಉಚಿತವಾಗಿ ವಿತರಿಸಲಾಯಿತು ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು .ಈ ಸಂದರ್ಭದಲ್ಲಿ K V K ವಿಜ್ಞಾನಿಗಳಾದ ಹಿರೇಮಠ ಸರ್, ಕೃಷಿ ಇಲಾಖೆಯ ಅಧಿಕಾರಿ ಬೆಳವಟಗಿ , RSK AO ದಾಸರ , ಗ್ರಾಮ ಆಡಳಿತ ಅಧಿಕಾರಿ ಶಿವು ಗೊರವಕಳ್ಳ ಊರಿನ ಮುಖ0ಡರಾದ ಶ್ರೀ ಬಸವರಾಜ ಸೋಮಗೊಂಡ, ಸಿದ್ದಪ್ಪ ಗಾಣಿಗೇರ,ಚನ್ನಪ್ಪ ನವಲಗುಂದ, ಈರಣ್ಣ ನವಲಗುಂದ, ಸಂಜೆಯ ಸಾತನವರ,…

Read More