ನವಲಗುಂದ ಪುರಸಭೆ ಡಿಸಿ ಸೂಚನೆ ಮೇರೆಗೆ ಇಂದಿರಾ ಕ್ಯಾಂಟೀನ್‍ಗೆ ದಿಢೀರ ಭೇಟಿ ನೀಡಿ, ಅಧಿಕಾರಿಗಳಿಂದ ಪರಿಶೀಲನೆ; ನಿಯಮಪಾಲಿಸದೇ ಇದ್ದಲ್ಲಿ ಶಿಸ್ತು ಕ್ರಮದ ಎಚ್ಚರಿಕೆ
ಧಾರವಾಡ ಜಿಲ್ಲಾ ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಇಂದಿರಾ ಕ್ಯಾಂಟೀನಲ್ಲಿ ಪೂರೈಸಲಾಗುತ್ತಿರುವ ಆಹಾರದ ಪ್ರಮಾಣ, ಗುಣಮಟ್ಟದ ಕುರಿತು ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳ ತಂಡ ರಚಿಸಿ, ಪರಿಶೀಲನೆಗೆ ಆದೇಶಿಸಿದ್ದರು. ಬೆಳಿಗ್ಗೆ 7:30 ಗಂಟೆಗೆ ನವಲಗುಂದ ಪಟ್ಟಣದ ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ ಅವರ ನೇತೃತ್ವದ ಅಧಿಕಾರಿಗಳ ತಂಡವು ದಿಢೀರ ಭೇಟಿ ನೀಡಿ, ಸ್ವತಃ ಉಪಹಾರ ಸೇವಿಸುವ ಮೂಲಕ ಆಹಾರದ ಪ್ರಮಾಣ, ಆಹಾರದ ಗುಣಮಟ್ಟ…
