ಒಳಮೀಸಲಾತಿ ಹಂಚಿಕೆಯಲ್ಲಿ 63 ಸಮುದಾಯಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಬಂಜಾರ, ಬೋವಿ ವಡ್ಡರ, ಸಮುದಾಯಗಳಿಂದ ಮಾನ್ಯ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಅಂಬೇಡ್ಕರ ಸರ್ಕಲದಲ್ಲಿ ಒಳಮೀಸಲಾತಿಯಿಂದ ಅನ್ಯಾಯಕ್ಕೊಳಗಾದ ಬಂಜಾರ, ಭೋವಿವಡ್ಡರ, ಕೊರಮ, ಕೊರಚ ಸಮುದಾಯಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ಮಾನ್ಯ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಭಾರತದಲ್ಲಿ ಸಹಸ್ರಾರು ವರ್ಷಗಳಿಂದ ಜಾರಿಯಲ್ಲಿರುವ ವರ್ಣವ್ಯವಸ್ಥೆ, ಜಾತಿಪದ್ಧತಿ ಮತ್ತು ಅಸ್ಪೃಶ್ಯತೆಯಿಂದಾಗಿ ನೂರಾರು ಜಾತಿಗಳು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುತ್ತಾರೆ. ಸ್ವಾತಂತ್ರ್ಯಾ ನಂತರ ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸಿ ಪರಿಶಿಷ್ಟ ಜಾತಿ & ಪ.ಪಂಗಡಗಳೆಂದು ಸಂವಿಧಾನಾತ್ಮಕವಾಗಿ ಹಲವು ಸೌಲಭ್ಯಗಳನ್ನು ಪಡೆಯಲು ಡಾ. ಬಾಬಾಸಾಹೇಬ ಅಂಬೇಡ್ಕರವರು…
