ಬೆಳಗಾವಿ ಡಿಸೆಂಬರ್ 8ರಿಂದ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆಅಧಿಕಾರಿಗಳಿಗೆ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೂಚಿಸಿದರು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ವಹಿಸಿ ಅವರು ಮಾತನಾಡಿದರು. ಡಿಸೆಂಬರ‌್ 8 ರಿಂದ 19 ರ ವರೆಗೆ ಜರುಗಲಿರುವ ಚಳಿಗಾಲದ ಅಧಿವೇಶನಕ್ಕೆ ನಿಯೋಜಿತ ಅಧಿಕಾರಿ ಸಿಬ್ಬಂದಿ ಬದ್ದತೆಯೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಅಧಿವೇಶನ ಯಶಸಸ್ವಿಗೊಳಿಸಬೇಕು. ಅಧಿವೇಶನದ ಸಂದರ್ಭದಲ್ಲಿ ಎದುರಾಗುವ ಯಾವುದೇ ತೆರನಾದ ಸಮಸ್ಯೆಗಳನ್ನು ಕೂಡಲೇ ಸಂಬಂಧಿತರ ಗಮನಕ್ಕೆ ತಂದು ತರುವುದರ ಮೂಲಕ ಸಮಸ್ಯಗಳನ್ನು ಪರಿಹರಿಸಿಕೊಳ್ಳಬೇಕು ಎಂದರು. ದೂರಸಂಪರ್ಕ ಹಾಗೂ ನೆಟವರ್ಕ್ ಸಮಸ್ಯೆಗಳು ತಲೆದೋರದಂತೆ…
