ಶುದ್ಧ ಕುಡಿಯುವ ಪೂರೈಕೆಗೆ ಕ್ರಮ ವಹಿಸಬೇಕು: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ಅವರು ಮಾತನಾಡಿದರು. ಸ್ಥಳೀಯ ಸಂಸ್ಥೆಗಳು ಬೇಸಿಗೆಯಲ್ಲಿ ಕುಡಿಯುವ ನೀರನ್ನು ಒದಗಿಸಲು ಅಗತ್ಯವಿರುವ ಅನುದಾನವನ್ನು ಮೀಸಲಿರಿಸಬೇಕು. ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳು ನಿರಂತರ ಸಭೆ ನಡೆಸಿ, ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡಿದರು. ಅಥಣಿ ಭಾಗದಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕಿಂತ ಹೆಚ್ಚಿದೆ. ನೀರು ಕಡಿಮೆಯಾಗಿರುವ ಜಲಾಶಯ ಮಟ್ಟವನ್ನು ಪರಿಶೀಲಿಸಿ ಅಗತ್ಯ ಪ್ರದೇಶಗಳಲ್ಲಿ ನೀರು…
