ಯರಗಟ್ಟಿ ಮನೆ ಬಾಗಿಲಿಗೆ ಸರ್ಕಾರದ ಯೋಜನೆ; ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ ರಾಜ್ಯ ಸರ್ಕಾರವು ಪ್ರತಿಯೊಬ್ಬ ಪ್ರಜೆಯನ್ನು ತಲುಪಬೇಕು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಸರ್ಕಾರ ಸಿದ್ಧವಾಗಿದೆ ಎಂಬ ಸಂದೇಶವನ್ನು ಪ್ರತಿ ಮನೆ ಮನೆಗೆ ನೀಡಬೇಕು ಎನ್ನುವ ಆಶಯದೊಂದಿಗೆ ಪ್ರಜಾಸೇವಾ ಆಂದೋಲನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಲೋಕೋಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಶನಿವಾರ ಜರುಗಿದ ಯರಗಟ್ಟಿ ಹಾಗೂ ಸವದತ್ತಿ ತಾಲೂಕಿನ ಪ್ರಜಾ ಸೇವೆ ಆಂದೋಲನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನೂತನ ಸರ್ಕಾರ…
