ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮತದಾರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಅಂತಿಮ ಮತದಾರ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಧಾರವಾಡ ಜಿಲ್ಲಾ ಚುನಾವಣೆ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಅಂತಿಮ ಮತದಾರ ಪಟ್ಟಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಾತನಾಡಿ, ಜನವರಿ 2025ಕ್ಕೆ ಅನ್ವಯವಾಗುವಂತೆ ಜಿಲ್ಲೆಯಲ್ಲಿ 8,05,768 ಪುರುಷ, 8,10,647 ಮಹಿಳಾ ಹಾಗೂ 95 ಜನ ತೃತೀಯಲಿಂಗಿಗಳು ಸೇರಿ ಒಟ್ಟು 16,16,415 ಜನ ಅರ್ಹ ಮತದಾರರು ಇದ್ದಾರೆ ಎಂದು ಅವರು ತಿಳಿಸಿದರು .ಅಕ್ಟೋಬರ್ 29, 2024 ರಂದು…
