ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ
ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಪರಿಶಿಷ್ಟ ಜಾತಿ/ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಜಾಗೃತಿ ಹಾಗೂ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಜಿಲ್ಲಾ ವ್ಯಾಪ್ತಿಯಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿ ಸದಸ್ಯರನ್ನು ಠಾಣೆ ವ್ಯಾಪ್ತಿಯ ಪ.ಜಾತಿ ಹಾಗೂ ಪ.ಪಂಗಡಗಳ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿದರೆ ಇದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ವಿವಿಧ ಸಂಘಟನೆಗಳ ಬಹುದಿನಗಳ ಬೇಡಿಕೆಯಂತೆ ಬೆಳಗಾವಿ…
