ಅತೀವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಸಚಿವ ಸಂತೋಷ ಲಾಡ್ ಭೇಟಿ
ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಣ್ಣಿಗೇರಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ 130 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಾನಿಯಾದ ಮನೆಗಳಿಗೆ ಎಸ್.ಡಿ.ಆರ್.ಎಫ್ ನಿಯಮಾವಳಿಗಳ ಅನುಸಾರ ಪರಿಶೀಲಿಸಿ, ಪರಿಹಾರವನ್ನು ನೀಡಲಾಗುತ್ತದೆ. ಜಿಲ್ಲಾಡಳಿತದಿಂದ ಪರಿಹಾರ ಕಾರ್ಯಗಳು ನಡೆಯುತ್ತಿವೆ. ಇನ್ನೂ ಹೆಚ್ಚಾಗಿ ಮಳೆ ಬರುವ ಸಾಧ್ಯತೆಯಿದೆ. ಸಾರ್ವಜನಿಕರು ಜಾಗರೂಕರಾಗಬೇಕಿದೆ. ಜನರು ಸರ್ಕಾರ, ಜಿಲ್ಲಾಡಳಿತ ನೀಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲನೆ ಮಾಡಬೇಕು ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು. ಕುಂದಗೋಳ ತಾಲೂಕಿನ…
