ಹೊಳಲೂರು ಗ್ರಾಮದಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಘಟಕದ ಪದಗ್ರಹಣ: ಅಧ್ಯಕ್ಷರಾಗಿ ಉಮೇಶ್ ಪೂಜಾರ್ ಅಧಿಕಾರ ಸ್ವೀಕಾರ
ಕನ್ನಡ ನೆಲ, ಜಲ ಹಾಗೂ ಭಾಷೆಯ ರಕ್ಷಣೆಗೆ ನಿರಂತರವಾಗಿ ಹೋರಾಡುತ್ತಿರುವ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲೆ ರೋಣ ತಾಲೂಕಿನ ಹೊಳಲೂರು ಗ್ರಾಮ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು.ಗ್ರಾಮದ ಆರಾಧ್ಯ ದೈವ ಪೂಜ್ಯ ಶ್ರೀ ಎಚ್ಚರೇಶ್ವರ ಸ್ವಾಮಿಗಳ ದಿವ್ಯ ಸಾನಿಧ್ಯ ಹಾಗೂ ಆಶೀರ್ವಾದದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಉತ್ತರ ಕರ್ನಾಟಕ ಹಾಗೂ ಗದಗ ಜಿಲ್ಲಾ ಅಧ್ಯಕ್ಷರ ಎಂ ಎ ಕುರ್ತ್ ಕೋಟಿನೇತೃತ್ವದಲ್ಲಿ ಜರುಗಿದ…
