ಲಿಂಗದಳ್ಳಿಯಲ್ಲಿ ಗ್ರಾಮದೇವತೆ ಜಾತ್ರಾ ಮಹೋತ್ಸವ
ವಿಜಯಪುರ: ತಾಳಿಕೋಟಿ ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿ ಹಾಗೂ ಸಡಗರ-ಸಂಭ್ರಮದಿಂದ ವಿಜೃಂಭಣೆಯಿಂದ ನಡೆಯಿತು.ಶುಕ್ರವಾರ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆ 6 ಗಂಟೆಗೆ ಸಾಂಪ್ರದಾಯಿಕ ಗಂಗಾಸ್ಥಳ ಮುಗಿಸಿಕೊಂಡು ಬಂದ ಬಳಿಕ, ಸಕಲ ವಾದ್ಯ ವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಗ್ರಾಮದೇವತೆಯ ಭವ್ಯ ರಥೋತ್ಸವ ನೆರವೇರಿತು.ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಗಮನ ಸೆಳೆದವು. ಸಾರವಾಡದ ಈಶ್ವರ ಗಾರುಡಿ ಗೊಂಬೆ ಗೆಳೆಯರ ಬಳಗ, ಬಾದಾಮಿ ತಾಲೂಕಿನ ಗೋವಿನಕೊಪ್ಪದ…
