ಡಾ.ಬಾಬುಜಗಜೀವನ ರಾಂ ಅವರ ದೂರದೃಷ್ಟಿ ಮತ್ತು ಅವರ ಸಾಮಾಜಿಕ ಕಳಕಳಿಯಿಂದ ಸಮಾಜವು ಪ್ರಗತಿಪರವಾಗಿದೆ: ಮಹಾದೇವ ಹರಿಜನ
ದೇಶದ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ದೂರದೃಷ್ಟಿ ಮತ್ತು ಸಾಮಾಜಿಕ ಕಳಕಳಿಯಿಂದಸಮಾಜವು ಪ್ರಗತಿಪರ ಮಾರ್ಗದಲ್ಲಿ ಸಾಗಲು, ಸದೃಡ ಶಕ್ತಿಯುತ ರಾಷ್ಟ್ರವಾಗಿ ಭಾರತ ಬೆಳೆಯಲು ಸಾಧ್ಯವಾಗಿದೆ ಎಂದು ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ರಾಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಹಾದೇವ ಹರಿಜನ ಅವರು ಹೇಳಿದರು. ಧಾರವಾಡ ನಗರದ ಸನ್ಮತಿ ಮಾರ್ಗದ ಹತ್ತಿರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹುಬ್ಬಳ್ಳಿ…
