ಕಿತ್ತೂರು ರಾಣಿ ಚನ್ನಮ್ಮ ಸಮಾಧಿ ಸ್ಥಳ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕಿತ್ತೂರು ರಾಣಿ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ತೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರು ಇಡಲು ಕೇಂದ್ರಕ್ಕೆ ಪತ್ರ ಬರೆದು ಒಂದು ವರ್ಷವಾದರೂ ಕೇಂದ್ರ ಸರಕಾರ ಇದುವರೆಗೆ ಯಾವುದೇ ಕ್ರಮವಹಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಶನಿವಾರ ನಡೆದ ಮೂರು ದಿನಗಳ ಕಾಲ ನಡೆದ 201 ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಿತ್ತೂರು ರಾಣಿ…
