ಫೆಬ್ರುವರಿ 5 ರಂದು ನಡೆಯಲಿರುವ ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶದ ಸಿದ್ಧತೆ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ನಿತಿಶ್ ಪಾಟೀಲ್
ಪೂರ್ವಭಾವಿ ಸಭೆಯ ಬಳಿಕ ಸರದಾರ ಹೈಸ್ಕೂಲ್ ಮೈದಾನಕ್ಕೆ ಭೇಟಿ ನೀಡಿದ ಶಾಸಕ ಆಸಿಫ್ ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿದರು. ಸಮಾವೇಶದಲ್ಲಿ ಹದಿನೈದು ಸಾವಿರಕ್ಕೂ ಅಧಿಕ ಫಲಾನುಭವಿಗಳು ಭಾಗವಹಿಸಲಿರುವುದರಿಂದ ಊಟ, ಕುಡಿಯುವ ನೀರು, ಪಾರ್ಕಿಂಗ್ ಮತ್ತಿತರ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ನಗರದಲ್ಲಿಯೇ ಸಮಾವೇಶ ನಡೆಯಲಿರುವುದರಿಂದ ಗ್ಯಾರಂಟಿ ಯೋಜನೆ ಫಲಾನುಭವಿಗಳು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ…
