ಕಲುಷಿತ ನೀರು ಸೇವನೆ ವದಂತಿ; ಗ್ರಾಮದ ಕೆಲವರಲ್ಲಿ ವಾಂತಿ ಬೇಧಿ; ಗುಡಿಸಾಗರಕ್ಕೆ ಶಾಸಕರ ನೇತೃತ್ವದಲ್ಲಿ ಡಿಸಿ, ಸಿಇಓ ಭೇಟಿ, ಆರೋಗ್ಯ ಸುರಕ್ಷತೆಗೆ ಸೂಚನೆ.
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಕೆಲವರು ವಾಂತಿ ಬೇಧಿಯಿಂದ ಅಸ್ವಸ್ಥರಾಗಿ, ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಗ್ರಾಮದ ಕುಡಿಯುವ ನೀರಿನ ಕೆರೆಯಿಂದ ನೀರು ಕುಡಿದು ಅನಾರೋಗ್ಯವಾಗಿದೆ ಎಂದು ಹೇಳಲಾಗಿತ್ತು. ತಕ್ಷಣ ನವಲಗುಂದ ತಾಲೂಕು ಆಸ್ಪತ್ರೆಗೆ ವಾಂತಿ ಬೇಧಿ ಪೀಡಿತರನ್ನು ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಇಂದು ಬೆಳಿಗ್ಗೆ ನವಲಗುಂದ ವಿಧಾನ ಸಭಾ ಮತಕ್ಷೇತ್ರದ ಶಾಸಕರಾದ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಹಾಗೂ ಎಸ್.ಪಿ ಗುಂಜನ್ ಆರ್ಯ ಅವರು ನವಲಗುಂದ…
