ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ: ಬಳ್ಳಾರಿ ಲೋಕಾಯುಕ್ತ ಎಸ್ಪಿ ಸಿದ್ಧರಾಜು
ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 15ನೇ ಸಂಸ್ಥಾಪನಾ ದಿನ-2024ರ ಪೂರ್ವ ದಿನದಂದು ಬಳ್ಳಾರಿ ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವಿವಿಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಕಲ್ಯಾಣ ಘಟಕ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ ಸ್ವಯಂ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣೆ’ ಕಾರ್ಯಕ್ರಮಕ್ಕೆ ಲೋಕಾಯುಕ್ತ ಎಸ್ಪಿ ಸಿದ್ಧರಾಜು ಚಂದ್ರಪ್ಪ ಚಾಲನೆ ನೀಡಿ ಅವರು ಮಾತನಾಡಿದರು.ರಕ್ತದಾನಕ್ಕಿಂತ ಶ್ರೇಷ್ಟ ದಾನ ಮತ್ತೊಂದಿಲ್ಲ, ಮಾನವಿಯತೆಗಾಗಿ ರಕ್ತದಾನ ಮಾಡಿದಲ್ಲಿ ನಮ್ಮಲ್ಲಿ ನವಚೈತನ್ಯ ಹುಟ್ಟುತ್ತದೆ…
