ಗೋಕಾಕ್ ಪಟ್ಟಣದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪ್ರಚಾರ ಸಭೆ
ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪರವಾಗಿ ಆಯೋಜನೆ ಮಾಡಲಾಗಿದ್ದ ಪ್ರಚಾರ ಸಭೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಿ ಆದ ನಂತರ ನಮಗೆ ಹೆಮ್ಮೆ ಅನಿಸುತ್ತದೆ. ಈ ಹಿಂದೆ ಬಹಳಷ್ಟು ಪ್ರಧಾನಿಗಳನ್ನು ನೋಡಿದ್ದೇನೆ. ಇಂದಿರಾಗಾಂಧಿ ನಂತರ ಗಟ್ಟಿಯಾದ ಪ್ರಧಾನಿ ಅಂದರೆ ಅದು ನರೇಂದ್ರ ಮೋದಿಯವರು. ಪ್ರಧಾನಿ ನರೇಂದ್ರ ಮೋದಿಯವರು ಭಾರತದ ನಾಯಕರು ಅಷ್ಟೇ ಅಲ್ಲ ವಿಶ್ವಾನಾಯಕರಾಗಿ ಬೆಳೆದು ನಿಂತಿದ್ದಾರೆ. ಕಳೆದ 10…
