ಖಾನಪೇಟೆದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಕಾರ್ಯಾಲಯವನ್ನು ಶ್ರೀಗಳು ಹಾಗೂ ಗಣ್ಯರು ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟೆದಲ್ಲಿ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಪಾಲ್ಗೊಂಡು ಅವರು ಮಾತನಾಡಿದರು.ರಾಜ್ಯದಲ್ಲಿಯೇ ನಮ್ಮ ಕಾರ್ಖಾನೆಯನ್ನು ಮಾದರಿ ಕಾರ್ಖಾನೆಯನ್ನಾಗಿ ಮಾಡಬೇಕೆಂಬ ಸದಿಚ್ಚೆಯೊಂದಿಗೆ ಶ್ರಮಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಕಾರ್ಖಾನೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವದು ಎಂದರು.ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಮಾತನಾಡಿ, ರೈತರ ಹಾಗೂ ಕಾರ್ಖಾನೆಯ ಶೇರುದಾರರ ಹಿತಕಾಯಲು ನಾವು ಬದ್ಧರಾಗಿದ್ದೇವೆ. ರೈತರ ಯೋಗಕ್ಷೇಮ ಮತ್ತು ಅವರ ಕಷ್ಟಗಳನ್ನು ಆಲಿಸಲು…
