ಲೋಕಾಪುರದಲ್ಲಿ ಅದ್ದೂರಿ ಮೆರವಣೆಗೆ ಮೂಲಕ ಗಣಪತಿ ವಿಸರ್ಜನೆ
ಬಾಗಲಕೋಟೆ ಜಿಲ್ಲೆ ಮುದ್ದೋಳ ತಾಲೂಕು ಲೋಕಾಪುರದಲ್ಲಿ ವಿವಿಧ ಕಡೆಗಳಲ್ಲಿ ಪ್ರತಿಷ್ಠಾಪಿಸಲಾದ ಗಣೇಶನ ಮೂರ್ತಿಯನ್ನು ಗಣೇಶೋತ್ಸವದ ಒಂಬತ್ತನೇ ದಿನವಾದ ರವಿವಾರ ಸಾವಿರಾರು ಜನರ ಸಮ್ಮುಖದಲ್ಲಿ ಅದ್ಧೂರಿ ಮೆರವಣಿಗೆಯಲ್ಲಿ ಡಿಜೆ ನೃತ್ಯ ಗಮನ ಸೆಳೆಯಿತು.
ಬಾಗಲಕೋಟೆ ಜಿಲ್ಲೆ ಮುದ್ದೋಳ ತಾಲೂಕು ಲೋಕಾಪುರದಲ್ಲಿ ವಿವಿಧ ಕಡೆಗಳಲ್ಲಿ ಪ್ರತಿಷ್ಠಾಪಿಸಲಾದ ಗಣೇಶನ ಮೂರ್ತಿಯನ್ನು ಗಣೇಶೋತ್ಸವದ ಒಂಬತ್ತನೇ ದಿನವಾದ ರವಿವಾರ ಸಾವಿರಾರು ಜನರ ಸಮ್ಮುಖದಲ್ಲಿ ಅದ್ಧೂರಿ ಮೆರವಣಿಗೆಯಲ್ಲಿ ಡಿಜೆ ನೃತ್ಯ ಗಮನ ಸೆಳೆಯಿತು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಹಿಂದೂ ಮಹಾಗಣಪತಿ ಉತ್ಸವ ಹಾಗೂ ಹಿಂದೂ ಜನಜಾಗೃತಿ ಸಮಾವೇಶವನ್ನು ವಿಶ್ವ ಹಿಂದೂ ಪರಿಷತ್ ಬೆಳಗಾವಿ ವಿಭಾಗ ಸತ್ಸಂಗ ಸಂಘದ ಮುಖಂಡರಾದ ಡಾ.ವಿಜಯೇಂದ್ರಚಾರ್ಯ.ಜೋಶಿ ಅವರುಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಸಮರ್ಪಣೆ ಮಾಡುವ ಮೂಲಕ ಉದ್ಘಾಟಿಸಿದರುಈ ವೇಳೆ ದಿವ್ಯಸಾನಿಧ್ಯ ಪ.ಪೂಜ್ಯ ಶ್ರೀ ಜಗದ್ಗುರು ಸದಾಶಿವಾನಂದ ಮಹಾಸ್ವಾಮಿಗಳು ಗದಗ ಹಾಗೂ ಶ್ರೀಮ.ನಿ.ಪ್ರ. ಬಸವ ಮಹಾಸ್ವಾಮಿಗಳು ಚೌಕಿಮಠ ವಿರಕ್ತ ಮಠ ಬಟಕುರ್ಕಿ ಇವರು ಭಾಗವಹಿಸಿದ್ದರು. ಅಧ್ಯಕ್ಷತೆ : ಪ್ರಕಾಶ್…
ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ರವಿವಾರ ಜರುಗಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಗೆ ಪುಷ್ಪ ನಮನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಸಲ್ಲಿಸಿ ಮಾತನಾಡಿದರು. ಪ್ರಜಾಪ್ರಭುತ್ವವು ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕಾಗಿ ನಮ್ಮ ಅತ್ಯುನ್ನತ ಆಕಾಂಕ್ಷೆಗಳನ್ನು ಸಾಕಾರಗೊಳಿಸುವ ಶಕ್ತಿಯುತ ಮತ್ತು ಕ್ರಿಯಾತ್ಮಕ ಶಕ್ತಿಯಾಗಿದೆ ಎಂದರು. ಭಾರತ ದೇಶವು ಅತ್ಯಂತ ಭವ್ಯ, ಶಕ್ತಿಶಾಲಿ ಮತ್ತು ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ. ದೇಶದಲ್ಲಿ ಪರಿಣಾಮಕಾರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮೂಲಧಾರೆ ಡಾ.ಬಿ.ಆರ್.ಅಂಬೇಡ್ಕರ್…
ಗದಗ ಜಿಲ್ಲೆ ಲಕ್ಷ್ಮೀಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಮಾನವ ಸರಪಳಿ ನಿರ್ಮಾಣ ಮಾಡಿದ ವೇಳೆಯಲ್ಲಿ ವಿದ್ಯಾರ್ಥಿಗಳ ಮೇಲೆ ಜೇನು ಹುಳುಗಳು ದಾಳಿ ನಡೆಸಿವೆ. ಘಟನೆಯಲ್ಲಿಇಬ್ಬರು ಶಿಕ್ಷಕಿಯರ ಮುಖ, ತಲೆ, ಕೈಗೆ ಜೇನು ಹುಳುಗಳು ಕಚ್ಚಿ ಗಾಯಗೊಳಿಸಿವೆ. ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಸರಸ್ವತಿ ಗುಡಿಸಾಗರ, ಸರೋಜಾ ದಿಂಡೂರು ಜೇನು ಹುಳುಗಳು ಕಚ್ಚಿಸಿಕೊಂಡು ಶಿಕ್ಷಕಿಯರಿಗೆ ಸ್ಥಳದಲ್ಲಿ ಇದ್ದ ಶಿರಹಟ್ಟಿ ಕ್ಷೇತ್ರದ ಶಾಸಕ ಸ್ವತಃ ವೈದ್ಯರಾದ ಡಾ. ಚಂದ್ರು…
ಬೆಳಗಾವಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತ ದೇಶದ ಪ್ರಜಾಪ್ರಭುತ್ವ, ಸಂವಿಧಾನದ ಮಹತ್ವವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇದೇ ಸೆ.15. ರಂದು ಜಿಲ್ಲೆಯಲ್ಲಿ ನಡೆಯಲಿರುವ 145 ಕಿ.ಮೀ. ಉದ್ದದ ಬೃಹತ್ ಮಾನವ ಸರಪಳಿ ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರೊಂದಿಗೆ ಮಾನವ ಸರಪಳಿಯ ಮಾರ್ಗವನ್ನು ಶುಕ್ರವಾರ ಪರಿಶೀಲಿಸಿದರು….
ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮವು ಸೆ.15ರಂದು ಅಚ್ಚುಕಟ್ಟಾಗಿ ನಡೆಯಬೇಕು. ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಅಧಿಕಾರಿಗಳು ಜಾಗೃತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಹೇಳಿದರು. ಪಟ್ಟಣದಲ್ಲಿ ಪೂರ್ವ ಸಿದ್ಧತೆ ಮಾರ್ಗ ಪರಿಶೀಲನೆ ನಡೆಸಿದರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಮಾರ್ಗ ಪರಿಶೀಲಿಸಿದ ಐಎಎಸ್ ಅಧಿಕಾರಿ ದಿನೇಶಕುಮಾರ ಮೀನಾ ಮಾತನಾಡಿ ಬೆಳಗಾವಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಬೆಳಿಗ್ಗೆ 9.30ರಿಂದ 10.30ರವರೆಗೆ 135 ಕಿ.ಮೀ ಉದ್ದದ ಮಾನವ ಸರಪಳಿ…
ಬೆಳಗಾವಿ : ಚನ್ನಮ್ಮನ ವಿಜಯೋತ್ಸವದ 200 ವರ್ಷಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಪ್ರಸಕ್ತ ಚನ್ನಮ್ಮ ಉತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರಾದ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಚನ್ನಮ್ಮ ಕಿತ್ತೂರು ಉತ್ಸವ-2024ರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಲಿನ ಚನ್ನಮ್ಮನ ಕಿತ್ತೂರ ಉತ್ಸವ 200ನೆ ವರ್ಷದ ವಿಜಯೋತ್ಸವದ ಅಂಗವಾಗಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಬೇಕು. ಉತ್ಸವದ ಹಿನ್ನಲೆಯಲ್ಲಿ ಕಿತ್ತೂರ ಸ್ವಚ್ಛತೆಗೆ…
ಹಾಸನ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಸಂಸದರ ಕಚೇರಿಯನ್ನು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರು ಉದ್ಘಾಟಿಸಿದರು. ನೂತನ ಕಚೇರಿಯಲ್ಲಿ ಸಂವಿಧಾನದ ಪೀಠಿಕೆಗೆ ಪುಷ್ಪಾರ್ಚನೆ ಮಾಡಿದಬಳಿಕ ಮಾತನಾಡಿದ ಸಚಿವರು ಜನರಿಗೆ ಸುಲಭವಾಗಿ ಸಿಗುವ ನಿಟ್ಟಿನಲ್ಲಿ ಕಚೇರಿಯನ್ನು ಬಳಸಿಕೊಂಡು ಜನರ ಅಹವಾಲು ಸ್ವೀಕರಿಸಿ ಬಗೆಹರಿಸುವ ಮೂಲಕ ಜನರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿ ಎಂದು ಶುಭ ಹಾರೈಸಿದರು. ಪ್ರತಿಯೊಬ್ಬ ಜನಪ್ರತಿನಿಧಿಗಳು ತಮ್ಮ ಅವಧಿಯಲ್ಲಿ ಮಾಡುವ ಒಳ್ಳೆಯ ಕೆಲಸಗಳ ಮೇಲೆ ಅವರ ಹೆಸರು ಚಿರಸ್ಥಾಯಿ…
ಧಾರವಾಡ ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್‍ದಲ್ಲಿ ಇಂದಿರಾ ಕ್ಯಾಂಟೀನ್ ಹೊಸ ದರ ಪಟ್ಟಿ ಮತ್ತು ವಿವಿಧ ಆಹಾರಗಳ ಪೂರೈಕೆಗೆ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಚಾಲನೆ ನೀಡಿ, ಮಾತನಾಡಿದರು. ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿಯಾಗಿದೆಇಂದಿರಾ ಕ್ಯಾಂಟೀನ್ ಅನ್ನುವುದು, ರಾಜ್ಯ…
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿದರು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತ ದೇಶದ ಪ್ರಜಾಪ್ರಭುತ್ವ, ಸಂವಿಧಾನದ ಮಹತ್ವವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸೆ.15. ರಂದು ಜಿಲ್ಲೆಯಲ್ಲಿ 145 ಕಿ.ಮೀ. ಉದ್ದದ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು ಸಂವಿಧಾನದ ಮೌಲ್ಯ ಹಾಗೂ ಅದರ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು ಕಳೆದ ವರ್ಷ ಸೆ. 15ರಂದು ಸಂವಿಧಾನ ಪಿಠೀಕೆಯನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಓದುವ…