ಧಾರವಾಡ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿ:ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ
ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳೊಂದಿಗೆ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಯುವನಿಧಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಸೂಚಿಸಿದರು. 2024 ರಲ್ಲಿ ಪದವಿ ಪಾಸಾದ, ಡಿಪ್ಲೋಮಾ ವಿದ್ಯಾರ್ಥಿಗಳು ಎನ್‍ಎಡಿ ದಲ್ಲಿ ನೋಂದಣೆ ಮಾಡಿಕೊಳ್ಳಲು ಹೆಚ್ಚು ಪ್ರಚಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.ಸಿ.ಎಂ.ಕೆ.ಕೆ.ವೈ ಹಾಗೂ ಇಂಡಸ್ಟ್ರಿ ಲಿಂಕೆಜ್ ಸೇಲ್ ಆಧಾರಿತ ತರಬೇತಿ ಕಾರ್ಯಕ್ರಮದ ಅನುಷ್ಟಾನ ಹಾಗೂ…
