ಬೆಳಗಾವಿ ಗಣೇಶ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಹಿಸಿ ಮಾತನಾಡಿದರು.
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಗಣೇಶ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಹಿಸಿ ಮಾತನಾಡಿದರು. ಗಣೇಶೋತ್ಸವ ಮಂಡಳಿಗಳಿಗೆ ಸುಲಭವಾಗಿ ಹಾಗೂ ಶೀಘ್ರವಾಗಿ ಒಂದೇ ಕಡೆ ಅನುಮತಿ ನೀಡಲು ಅನುಕೂಲವಾಗುವಂತೆ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 12 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಆಯಾ ಪೊಲೀಸ್ ಠಾಣೆಗಳಲ್ಲಿಯೇ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಹೆಸ್ಕಾಂ, ಪೊಲೀಸ್, ಮಹಾನಗರ ಪಾಲಿಕೆ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಆಯಾ ಪೊಲೀಸ್ ಠಾಣೆಯ…
