ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯಗಳು ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣ: ಶಿವಪ್ರಿಯಾ ಕಡೇಚೂರ
ಬೆಳಗಾವಿ, ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯದ ವಿದ್ಯಾರ್ಥಿಗಳಿಗೆ ಸರಕಾರವು ಗುಣಮಟ್ಟದ ಆಹಾರ, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ವ್ಯವಸ್ಥೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲವಾಗುವಂತೆ ಅತ್ಯುತ್ತಮ ಸೌಲಭ್ಯಗಳನ್ನು ನೀಡುತ್ತಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಬೆಳಗಾವಿ ನಗರದ ಮಚ್ಚೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿದ ಬಳಿಕ ಮಾತನಾಡಿದರು….
