ಸವದತ್ತಿ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ
ತಿರುಪತಿ ಮಾದರಿಯನ್ನು ಅಧ್ಯಯನ ಮಾಡಿಕೊಂಡು ಅದೇ ಮಾದರಿಯಲ್ಲಿ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಸ್ಥಾನಕ್ಕೆ ಪ್ರತಿವರ್ಷ ಕೋಟ್ಯಂತರ ಭಕ್ತಾಧಿಗಳು ಭೇಟಿ ನೀಡುವುದರಿಂದ ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಇತರೆ ಮೂಲಸೌಕರ್ಯ ಒದಗಿಸುವುದು ಸರಕಾರದ ಪ್ರಥಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಗೋವಾ ರಾಜ್ಯಗಳಿಂದ ಆಗಮಿಸುವ…
