ಭಾರತೀಯ ಹವಾಮಾನ ಇಲಾಖೆಯು ಮುಂದಿನ 5 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ.
ಮುಂದಿನ 5 ದಿನಗಳಲ್ಲಿ ಉತ್ತರ ಕರ್ನಾಟಕದ ಬಹಳಷ್ಟು ಸ್ಥಾನಗಳಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗಬಹುದೆಂದು ಹವಾಮಾನ ಇಲಾಖೆ ಹೇಳಿದೆ. ಜನರು ಹಗಲು ಸಮಯದಲ್ಲಿ ಸಾಧ್ಯವಾದಷ್ಟು ಮನೆಯಲ್ಲಿಯೇ ಇರಬೇಕು, ಜನರು ಮನೆಯಿಂದ ಹೊರಗೆ ಹೋದಾಗಲೆಲ್ಲಾ ನೀರು ಅಥವಾ ದ್ರವ ಪದಾರ್ಥಗಳನ್ನು ತಮ್ಮೊಂದಿಗೆ ಒಯ್ಯುವಂತೆ ಹವಾಮಾನ ಇಲಾಖೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕಲಬುರಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ…
